Isaiah · chapter 47 · verse 8
Isaiah 47:8 in Kannada
ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
Naane iruvavalu nanna horatu innu yaaroo illa. Naanu vidhaveyaagi kootukollu vadilla; putrashokavannu anubhavisuvadilla endu andukolluvavale, bhogaasaktale, nemmadi yaagi nelegondiruvavale, eega idannu kelu.
Isaiah 47:8 in English
- King James Version (KJV)
- Therefore hear now this, [thou that art] given to pleasures, that dwellest carelessly, that sayest in thine heart, I [am], and none else beside me; I shall not sit [as] a widow, neither shall I know the loss of children:
- World English Bible (WEB)
- “Now therefore hear this, you who are given to pleasures, who sit securely, who say in your heart, ‘I am, and there is no one else besides me. I won’t sit as a widow, neither will I know the loss of children.’
- American Standard Version (ASV)
- Now therefore hear this, thou that art given to pleasures, that sittest securely, that sayest in thy heart, I am, and there is none else besides me; I shall not sit as a widow, neither shall I know the loss of children:
- Bible in Basic English (BBE)
- So now take note of this, you who are given up to pleasure, living without fear of evil, saying in your heart, I am, and there is no one like me; I will never be a widow, or have my children taken from me.
- Darby Translation (DBY)
- And now hear this, thou voluptuous one, that dwellest carelessly, that sayest in thy heart, It is I, and there is none but me; I shall not sit as a widow, neither shall I know loss of children:
- Webster's Bible (WBS)
- Therefore hear now this, [thou that art] given to pleasures, that dwellest carelessly, that sayest in thy heart, I [am] , and none else besides me; I shall not sit [as] a widow, neither shall I know the loss of children:
- Young's Literal Translation (YLT)
- And now, hear this, O luxurious one, Who is sitting confidently — Who is saying in her heart, 'I [am], and none else, I sit not a widow, nor know bereavement.'
Read in context
- 6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
- 7ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
- 8ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.
- 9ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
- 10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
Cross references
- Isaiah 32:9 ಯೆಶಾಯ 32:9ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Isaiah 47:10 ಯೆಶಾಯ 47:10ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
- Isaiah 45:6 ಯೆಶಾಯ 45:6ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Revelation 18:3–8 ಪ್ರಕಟನೆ 18:3–8ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು. ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು. ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ. ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ. ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Isaiah 21:4–5 ಯೆಶಾಯ 21:4–5ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
- Judges 18:27 ನ್ಯಾಯಸ್ಥಾಪಕರು 18:27ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Jeremiah 50:31–32 ಯೆರೆಮೀಯ 50:31–32ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
- Habakkuk 2:5–8 ಹಬಕ್ಕೂಕ 2:5–8ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ. ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ? ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ. ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- Isaiah 22:12–13 ಯೆಶಾಯ 22:12–13ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು. ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.