Isaiah · chapter 48 · verse 12
Isaiah 48:12 in Kannada
ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
O yaakobe, naanu kareda israayele, nanna kadege kivigodu; aatanu--naane; naane modalaneyavanu, naane kadeyavanu.
Isaiah 48:12 in English
- King James Version (KJV)
- Hearken unto me, O Jacob and Israel, my called; I [am] he; I [am] the first, I also [am] the last.
- World English Bible (WEB)
- “Listen to me, O Jacob, and Israel my called: I am he. I am the first. I am also the last.
- American Standard Version (ASV)
- Hearken unto me, O Jacob, and Israel my called: I am he; I am the first, I also am the last.
- Bible in Basic English (BBE)
- Give ear to me, Jacob, and Israel, my loved one; I am he, I am the first and I am the last.
- Darby Translation (DBY)
- Hearken unto me, Jacob, and [thou] Israel, my called. I [am] HE; I, the first, and I, the last.
- Webster's Bible (WBS)
- Hearken to me, O Jacob and Israel, my called; I [am] he; I [am] the first, I also [am] the last.
- Young's Literal Translation (YLT)
- Hearken to me, O Jacob, and Israel, My called one, I [am] He, I [am] first, and I [am] last;
Read in context
- 10ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
- 11ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.
- 12ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
- 13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- 14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
Cross references
- Isaiah 41:4 ಯೆಶಾಯ 41:4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Revelation 22:13 ಪ್ರಕಟನೆ 22:13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Isaiah 43:11 ಯೆಶಾಯ 43:11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Revelation 2:8 ಪ್ರಕಟನೆ 2:8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.