Isaiah · chapter 48 · verse 3
Isaiah 48:3 in Kannada
ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
Aarambhadalle hale sangatigalannu naanu prakatisiddene. Avu nanna baayinda horatavu mattu naanu avugalannu torisiddene. Naanu tattane nadesalu avu neraveridavu.
Isaiah 48:3 in English
- King James Version (KJV)
- I have declared the former things from the beginning; and they went forth out of my mouth, and I shewed them; I did [them] suddenly, and they came to pass.
- World English Bible (WEB)
- I have declared the former things from of old. Yes, they went out of my mouth, and I revealed them. I did them suddenly, and they happened.
- American Standard Version (ASV)
- I have declared the former things from of old; yea, they went forth out of my mouth, and I showed them: suddenly I did them, and they came to pass.
- Bible in Basic English (BBE)
- I gave word in the past of the things which came about; they came from my mouth, and I made them clear: suddenly I did them, and they came about.
- Darby Translation (DBY)
- I have declared the former things long ago; and they went forth out of my mouth, and I caused them to be heard: I wrought suddenly, and they came to pass.
- Webster's Bible (WBS)
- I have declared the former things from the beginning; and they went forth from my mouth, and I showed them; I did [them] suddenly, and they came to pass.
- Young's Literal Translation (YLT)
- The former things from that time I declared, And from my mouth they have gone forth, And I proclaim them, Suddenly I have done, and it cometh.
Read in context
- 1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- 2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- 3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
- 4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
- 5ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.
Cross references
- Isaiah 42:9 ಯೆಶಾಯ 42:9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- Joshua 21:45 ಯೆಹೋಶುವ 21:45ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- Isaiah 41:22 ಯೆಶಾಯ 41:22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
- Isaiah 44:7–8 ಯೆಶಾಯ 44:7–8ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ. ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Isaiah 45:21 ಯೆಶಾಯ 45:21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
- Isaiah 46:9–10 ಯೆಶಾಯ 46:9–10ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Isaiah 43:9 ಯೆಶಾಯ 43:9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
- Joshua 23:14–15 ಯೆಹೋಶುವ 23:14–15ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು. ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Isaiah 37:7 ಯೆಶಾಯ 37:7ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- Isaiah 10:33–34 ಯೆಶಾಯ 10:33–34ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Isaiah 10:12–19 ಯೆಶಾಯ 10:12–19ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.