Isaiah · chapter 48 · verse 8
Isaiah 48:8 in Kannada
ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
Haudu, neenu kelilla, tilidoo illa; puraatana kaaladinda ninna kiviyu terede illa; yaakandare neenu dodda vanchakanu endoo garbhadindale neenu drohiyendoo naanu tilidukondiddene.
Isaiah 48:8 in English
- King James Version (KJV)
- Yea, thou heardest not; yea, thou knewest not; yea, from that time [that] thine ear was not opened: for I knew that thou wouldest deal very treacherously, and wast called a transgressor from the womb.
- World English Bible (WEB)
- Yes, you didn’t hear. Yes, you didn’t know. Yes, from of old your ear was not opened, for I knew that you dealt very treacherously, and were called a transgressor from the womb.
- American Standard Version (ASV)
- Yea, thou heardest not; yea, thou knewest not; yea, from of old thine ear was not opened: for I knew that thou didst deal very treacherously, and wast called a transgressor from the womb.
- Bible in Basic English (BBE)
- Truly you had no word of them, no knowledge of them; no news of them in the past had come to your ears; because I saw how false was your behaviour, and that your heart was turned against me from your earliest days.
- Darby Translation (DBY)
- Yea, thou heardest not, yea, thou knewest not, yea, from of old thine ear was not opened; for I knew that thou wouldest ever deal treacherously, and thou wast called a transgressor from the womb.
- Webster's Bible (WBS)
- Yes, thou heardst not; yes, thou knewest not; yes, from that time [that] thy ear was not opened: for I knew that thou wouldst deal very treacherously, and wast called a transgressor from the womb.
- Young's Literal Translation (YLT)
- Yea, thou hast not heard, Yea, thou hast not known, Yea, from that time not opened hath thine ear, For I have known thou dealest treacherously, And 'Transgressor from the belly,' One is crying to thee.
Read in context
- 6ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
- 7ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
- 8ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
- 9ನನ್ನ ಹೆಸರು ಕೆಡದಂತೆ ನನ್ನ ಕೋಪವನ್ನು ತಡೆ ಮಾಡಿದೆ. ನನ್ನ ಸ್ತುತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.
- 10ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
Cross references
- Psalm 58:3 ಕೀರ್ತನೆಗಳು 58:3ದುಷ್ಟರು ಗರ್ಭದಿಂದಲೇ ದೂರವಾಗುತ್ತಾರೆ; ಹುಟ್ಟಿದಾಗಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.
- Hosea 5:7 ಹೋಶೇಯ 5:7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
- John 12:39–40 ಯೋಹಾನನು 12:39–40ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Jeremiah 6:10 ಯೆರೆಮೀಯ 6:10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
- Ezekiel 16:3–5 ಯೆಹೆಜ್ಕೇಲನು 16:3–5ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
- Matthew 13:13–15 ಮತ್ತಾಯನು 13:13–15ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Isaiah 42:19–20 ಯೆಶಾಯ 42:19–20ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು? ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
- Malachi 2:11 ಮಲಾಕಿಯ 2:11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- Jeremiah 3:7–11 ಯೆರೆಮೀಯ 3:7–11ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Psalm 51:5 ಕೀರ್ತನೆಗಳು 51:5ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
- Deuteronomy 9:7–24 ಧರ್ಮೋಪದೇಶಕಾಂಡ 9:7–24ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ. ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು. ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು. ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು. ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು. ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ. ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು. ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು. ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು. ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು. ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು. ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು. ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು. ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ. ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.