Isaiah · chapter 49 · verse 1
Isaiah 49:1 in Kannada
ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
O dveepa nivaasigale, nanna maatannu keliri. Doorada janagale, kivigodiri! Naanu garbhadalliddaagale kartanu nannannu kare danu. Taayiya udaradalliddandinindaloo nanna hesarannu heluttiddaane.
Isaiah 49:1 in English
- King James Version (KJV)
- Listen, O isles, unto me; and hearken, ye people, from far; The LORD hath called me from the womb; from the bowels of my mother hath he made mention of my name.
- World English Bible (WEB)
- Listen, islands, to me. Listen, you peoples, from afar: the LORD has called me from the womb; from the inside of my mother, he has mentioned my name.
- American Standard Version (ASV)
- Listen, O isles, unto me; and hearken, ye peoples, from far: Jehovah hath called me from the womb; from the bowels of my mother hath he made mention of my name:
- Bible in Basic English (BBE)
- Give ear, O sea-lands, to me; and take note, you peoples from far: I have been marked out by the Lord from the first; when I was still in my mother's body, he had my name in mind:
- Darby Translation (DBY)
- Listen, O isles, unto me; and hearken, ye peoples from afar. Jehovah hath called me from the womb; from the bowels of my mother hath he made mention of my name.
- Webster's Bible (WBS)
- Listen to me, O Isles; and hearken, ye people, from far; The LORD hath called me from the womb; from the bowels of my mother hath he made mention of my name.
- Young's Literal Translation (YLT)
- Hearken, O isles, unto me, And attend, O peoples, from afar, Jehovah from the womb hath called me, From the bowels of my mother He hath made mention of my name.
Read in context
- 1ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
- 2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- 3ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
Cross references
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Galatians 1:15 ಗಲಾತ್ಯದವರಿಗೆ 1:15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- Isaiah 44:2 ಯೆಶಾಯ 44:2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- Isaiah 49:5 ಯೆಶಾಯ 49:5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
- Luke 1:31 ಲೂಕನು 1:31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
- Psalm 71:5–6 ಕೀರ್ತನೆಗಳು 71:5–6ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ. ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
- Matthew 1:20–21 ಮತ್ತಾಯನು 1:20–21ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- 1 Peter 1:20 1 ಪೇತ್ರನು 1:20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- Luke 2:10–11 ಲೂಕನು 2:10–11ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Zephaniah 2:11 ಚೆಫನ್ಯ 2:11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- Isaiah 46:3 ಯೆಶಾಯ 46:3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.