Isaiah · chapter 49 · verse 10
Isaiah 49:10 in Kannada
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
Avarige hasive yaagali baayaarikeyaagali iravu. Illave jhalavoo bisiloo badiyavu; yaakandare ava rannu karunisuvaatanu avarannu nadesuttaa neeru kkuva orategala balige taruvanu.
Isaiah 49:10 in English
- King James Version (KJV)
- They shall not hunger nor thirst; neither shall the heat nor sun smite them: for he that hath mercy on them shall lead them, even by the springs of water shall he guide them.
- World English Bible (WEB)
- They shall not hunger nor thirst; neither shall the heat nor sun strike them, for he who has mercy on them will lead them. He will guide them by springs of water.
- American Standard Version (ASV)
- They shall not hunger nor thirst; neither shall the heat nor sun smite them: for he that hath mercy on them will lead them, even by springs of water will he guide them.
- Bible in Basic English (BBE)
- They will not be in need of food or drink, or be troubled by the heat or the sun: for he who has mercy on them will be their guide, taking them by the springs of water.
- Darby Translation (DBY)
- They shall not hunger nor thirst, neither shall the heat nor sun smite them; for he that hath mercy on them will lead them, and by the springs of water will he guide them.
- Webster's Bible (WBS)
- They shall not hunger nor thirst, neither shall the heat nor sun smite them: for he that hath mercy on them shall lead them, even by the springs of water shall he guide them.
- Young's Literal Translation (YLT)
- They do not hunger, nor thirst, Nor smite them doth mirage and sun, For He who is pitying them doth lead them, And by fountains of waters doth tend them.
Read in context
- 8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- 9ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
- 10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- 11ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.
- 12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
Cross references
- Revelation 7:16–17 ಪ್ರಕಟನೆ 7:16–17ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Ezekiel 34:23 ಯೆಹೆಜ್ಕೇಲನು 34:23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Psalm 121:5–6 ಕೀರ್ತನೆಗಳು 121:5–6ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ. ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
- Jeremiah 31:9 ಯೆರೆಮೀಯ 31:9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- John 10:3–4 ಯೋಹಾನನು 10:3–4ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ. ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Isaiah 35:7 ಯೆಶಾಯ 35:7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- Isaiah 4:6 ಯೆಶಾಯ 4:6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.