Isaiah · chapter 49 · verse 14
Isaiah 49:14 in Kannada
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
Aadare cheeyonu--kartanu nannannu talli bittiddaane mattu nanna kartanu nannannu maretu bittiddaanallaa endu andukondalu.
Isaiah 49:14 in English
- King James Version (KJV)
- But Zion said, The LORD hath forsaken me, and my Lord hath forgotten me.
- World English Bible (WEB)
- But Zion said, “The LORD has forsaken me, and the Lord has forgotten me.”
- American Standard Version (ASV)
- But Zion said, Jehovah hath forsaken me, and the Lord hath forgotten me.
- Bible in Basic English (BBE)
- But Zion said, The Lord has given me up, I have gone from his memory.
- Darby Translation (DBY)
- But Zion said, Jehovah hath forsaken me, and the Lord hath forgotten me.
- Webster's Bible (WBS)
- But Zion said, The LORD hath forsaken me, and my LORD hath forgotten me.
- Young's Literal Translation (YLT)
- And Zion saith, 'Jehovah hath forsaken me, And my Lord hath forgotten me.'
Read in context
- 12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
- 13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- 14ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
- 15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- 16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
Cross references
- Isaiah 40:27 ಯೆಶಾಯ 40:27ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
- Psalm 22:1 ಕೀರ್ತನೆಗಳು 22:1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
- Romans 11:1–5 ರೋಮಾಪುರದವರಿಗೆ 11:1–5ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ-- ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ? ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- Psalm 89:38–46 ಕೀರ್ತನೆಗಳು 89:38–46ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ; ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ. ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ. ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ. ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ. ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ. ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Lamentations 5:20 ಪ್ರಲಾಪಗಳು 5:20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Jeremiah 23:39 ಯೆರೆಮೀಯ 23:39ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- Psalm 77:6–9 ಕೀರ್ತನೆಗಳು 77:6–9ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು. ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.