Isaiah · chapter 49 · verse 15
Isaiah 49:15 in Kannada
ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
Tanna garbhada magana mele karunisade obba hengasu tanna mole koosannu maretaale? Haudu, avalu mareyabahudu, aadaroo naanu ninnannu mare yuvadilla.
Isaiah 49:15 in English
- King James Version (KJV)
- Can a woman forget her sucking child, that she should not have compassion on the son of her womb? yea, they may forget, yet will I not forget thee.
- World English Bible (WEB)
- “Can a woman forget her nursing child, that she should not have compassion on the son of her womb? Yes, these may forget, yet I will not forget you!
- American Standard Version (ASV)
- Can a woman forget her sucking child, that she should not have compassion on the son of her womb? yea, these may forget, yet will not I forget thee.
- Bible in Basic English (BBE)
- Will a woman give up the child at her breast, will she be without pity for the fruit of her body? yes, these may, but I will not let you go out of my memory.
- Darby Translation (DBY)
- Can a woman forget her sucking child, that she should not have compassion on the son of her womb? Even these forget, but I will not forget thee.
- Webster's Bible (WBS)
- Can a woman forget her sucking child, that she should not have compassion on the son of her womb? yes, they may forget, yet I will not forget thee.
- Young's Literal Translation (YLT)
- Forget doth a woman her suckling, The loved one — the son of her womb? Yea, these forget — but I — I forget not thee.
Read in context
- 13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- 14ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
- 15ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- 16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
- 17ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.
Cross references
- Isaiah 44:21 ಯೆಶಾಯ 44:21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
- Psalm 103:13 ಕೀರ್ತನೆಗಳು 103:13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
- Matthew 7:11 ಮತ್ತಾಯನು 7:11ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Hosea 11:1 ಹೋಶೇಯ 11:1ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
- Malachi 3:17 ಮಲಾಕಿಯ 3:17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Lamentations 4:10 ಪ್ರಲಾಪಗಳು 4:10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- 1 Kings 3:26–27 1 ಅರಸುಗಳು 3:26–27ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು. ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- 2 Kings 6:28–29 2 ಅರಸುಗಳು 6:28–29ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- 2 Kings 11:1–2 2 ಅರಸುಗಳು 11:1–2ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು. ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
- Romans 11:28–29 ರೋಮಾಪುರದವರಿಗೆ 11:28–29ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ. ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.