Isaiah · chapter 49 · verse 19
Isaiah 49:19 in Kannada
ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
Ninna haalaada sthalagaloo ninna ekaanta sthalagaloo kedavalpatta ninna deshavoo eega nivaasi galige ikkattaaguvavu; ninnannu nungidavaru doora vaaguvaru.
Isaiah 49:19 in English
- King James Version (KJV)
- For thy waste and thy desolate places, and the land of thy destruction, shall even now be too narrow by reason of the inhabitants, and they that swallowed thee up shall be far away.
- World English Bible (WEB)
- “For, as for your waste and your desolate places, and your land that has been destroyed, surely now that land will be too small for the inhabitants, and those who swallowed you up will be far away.
- American Standard Version (ASV)
- For, as for thy waste and thy desolate places, and thy land that hath been destroyed, surely now shalt thou be too strait for the inhabitants, and they that swallowed thee up shall be far away.
- Bible in Basic English (BBE)
- For though the waste places of your land have been given to destruction, now you will not be wide enough for your people, and those who made you waste will be far away.
- Darby Translation (DBY)
- For [in] thy waste and thy desolate places, and thy destroyed land, thou shalt even now be too straitened by reason of the inhabitants, and they that swallowed thee up shall be far away.
- Webster's Bible (WBS)
- For thy waste and thy desolate places, and the land of thy destruction, shall even now be too narrow by reason of the inhabitants, and they that swallowed thee up shall be far away.
- Young's Literal Translation (YLT)
- Because thy wastes, and thy desolate places, And the land of thy ruins, Surely now are straitened because of inhabitants, And far off have been those consuming thee.
Read in context
- 17ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.
- 18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
- 19ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
- 20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- 21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
Cross references
- Zechariah 10:10 ಜೆಕರ್ಯ 10:10ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
- Isaiah 54:1–2 ಯೆಶಾಯ 54:1–2ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
- Jeremiah 30:18–19 ಯೆರೆಮೀಯ 30:18–19ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು. ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Psalm 56:1–2 ಕೀರ್ತನೆಗಳು 56:1–2ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- Hosea 1:10–11 ಹೋಶೇಯ 1:10–11ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು. ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Isaiah 49:25–26 ಯೆಶಾಯ 49:25–26ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Jeremiah 30:16 ಯೆರೆಮೀಯ 30:16ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
- Jeremiah 33:10–11 ಯೆರೆಮೀಯ 33:10–11ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- Isaiah 49:17 ಯೆಶಾಯ 49:17ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು.
- Jeremiah 51:44 ಯೆರೆಮೀಯ 51:44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.