Isaiah · chapter 49 · verse 21
Isaiah 49:21 in Kannada
ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
Aaga neenu nana goskara ivarannu yaaru nannalli padedaru? Naano, makkalannu kaledukondavalu, ekaanta vaagi sereyalliddu horage haakalpattavala haage iddenu. Ivarannu saakidavaru yaaru? Avare lliddaru endu andukolluvi.
Isaiah 49:21 in English
- King James Version (KJV)
- Then shalt thou say in thine heart, Who hath begotten me these, seeing I have lost my children, and am desolate, a captive, and removing to and fro? and who hath brought up these? Behold, I was left alone; these, where [had] they [been]?
- World English Bible (WEB)
- Then you will say in your heart, ‘Who has conceived these for me, since I have been bereaved of my children and am alone, an exile, and wandering back and forth? Who has brought these up? Behold, I was left alone. Where were these?’”
- American Standard Version (ASV)
- Then shalt thou say in thy heart, Who hath begotten me these, seeing I have been bereaved of my children, and am solitary, an exile, and wandering to and fro? and who hath brought up these? Behold, I was left alone; these, where were they?
- Bible in Basic English (BBE)
- Then you will say in your heart, Who has given me all these children? when my children had been taken from me, and I was no longer able to have others, who took care of these? when I was by myself, where then were these?
- Darby Translation (DBY)
- And thou shalt say in thy heart, Who hath borne me these, seeing I had lost my children and was desolate, an exile, and driven about? and who hath brought up these? behold, I was left alone; these, where were they?
- Webster's Bible (WBS)
- Then shalt thou say in thy heart, Who hath begotten these for me, seeing I have lost my children, and am desolate, a captive, and removing to and fro? and who hath brought up these? Behold, I was left alone; these, where [have] they [been] ?
- Young's Literal Translation (YLT)
- And thou hast said in thy heart: 'Who hath begotten for me — these? And I bereaved and gloomy, A captive, and turned aside, And these — who hath nourished? Lo, I — I was left by myself, these — whence [are] they?
Read in context
- 19ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
- 20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- 21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- 22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- 23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
Cross references
- Isaiah 1:8 ಯೆಶಾಯ 1:8ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
- Jeremiah 31:15–17 ಯೆರೆಮೀಯ 31:15–17ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ; ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು. ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
- Romans 11:24 ರೋಮಾಪುರದವರಿಗೆ 11:24ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- Isaiah 5:13 ಯೆಶಾಯ 5:13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- Isaiah 52:2 ಯೆಶಾಯ 52:2ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
- Lamentations 1:1–3 ಪ್ರಲಾಪಗಳು 1:1–3ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು! ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು. ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
- Matthew 24:29–30 ಮತ್ತಾಯನು 24:29–30ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು. ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Romans 11:11–17 ರೋಮಾಪುರದವರಿಗೆ 11:11–17ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು. ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ? ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ. ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು. ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ. ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ. ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- Isaiah 62:4 ಯೆಶಾಯ 62:4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- Isaiah 60:15 ಯೆಶಾಯ 60:15ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
- Isaiah 51:17–20 ಯೆಶಾಯ 51:17–20ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ. ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ. ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ? ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
- Isaiah 3:26 ಯೆಶಾಯ 3:26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.