Isaiah · chapter 49 · verse 22
Isaiah 49:22 in Kannada
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
Kartanaada devaru intennuttaane--igo, naanu anyajanagala kadege kai etti janarige nanna dhvajavannu ettuvenu; avaru ninna kumaararannu kaihididu taruvaru; ninna kumaarteyarannu tamma hegalamele taruvaru.
Isaiah 49:22 in English
- King James Version (KJV)
- Thus saith the Lord GOD, Behold, I will lift up mine hand to the Gentiles, and set up my standard to the people: and they shall bring thy sons in [their] arms, and thy daughters shall be carried upon [their] shoulders.
- World English Bible (WEB)
- The Lord GOD says, “Behold, I will lift up my hand to the nations, and lift up my banner to the peoples. They shall bring your sons in their bosom, and your daughters shall be carried on their shoulders.
- American Standard Version (ASV)
- Thus saith the Lord Jehovah, Behold, I will lift up my hand to the nations, and set up my ensign to the peoples; and they shall bring thy sons in their bosom, and thy daughters shall be carried upon their shoulders.
- Bible in Basic English (BBE)
- This is the word of the Lord God: See, I will make a sign with my hand to the nations, and put up my flag for the peoples; and they will take up your sons on their beasts, and your daughters on their backs.
- Darby Translation (DBY)
- Thus saith the Lord Jehovah: Behold, I will lift up my hand to the nations, and set up my banner to the peoples; and they shall bring thy sons in [their] bosom, and thy daughters shall be carried upon the shoulder.
- Webster's Bible (WBS)
- Thus saith the Lord God, Behold, I will lift up my hand to the Gentiles, and set up my standard to the people: and they shall bring thy sons in [their] arms, and thy daughters shall be carried upon [their] shoulders.
- Young's Literal Translation (YLT)
- Thus said the Lord Jehovah: 'Lo, I lift up unto nations My hand, And unto peoples I raise up Mine ensign, And they have brought thy sons in the bosom, And thy daughters on the shoulder are carried.
Read in context
- 20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- 21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- 22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- 23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- 24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
Cross references
- Isaiah 14:2 ಯೆಶಾಯ 14:2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Luke 13:29 ಲೂಕನು 13:29ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
- Isaiah 49:12 ಯೆಶಾಯ 49:12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 11:10–12 ಯೆಶಾಯ 11:10–12ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು. ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- Isaiah 60:3–11 ಯೆಶಾಯ 60:3–11ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
- Isaiah 66:20 ಯೆಶಾಯ 66:20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Psalm 67:4–7 ಕೀರ್ತನೆಗಳು 67:4–7ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು. ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Isaiah 42:1–4 ಯೆಶಾಯ 42:1–4ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- up · H5375נָשָׂא nâsâʼ
- hand · H3027יָד yâd
- Gentiles · H1471גּוֹי gôwy
- up · H7311רוּם rûwm
- standard · H5251נֵס nêç
- people · H5971עַם ʻam
- bring · H935בּוֹא bôwʼ
- sons · H1121בֵּן bên
- arms · H2684חֹצֶן chôtsen
- daughters · H1323בַּת bath
- carried · H5375נָשָׂא nâsâʼ
- shoulders · H3802כָּתֵף kâthêph