Isaiah · chapter 49 · verse 24
Isaiah 49:24 in Kannada
ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
Shoorana kaiyolaginda kolleyannu tegedu kollabahudo? Illave nyaayavaagi sereyava rannu bidisabahudo? 25aadare kartanu heega nnuttaane--shoorana sereyavaru tegeyalpaduvaru; bhayankaravaada kolleyu bidisalpaduvadu; ninno dane horaaduvavana sangada naane horaadi ninna makkalannu naanu rakshisuvenu.
Isaiah 49:24 in English
- King James Version (KJV)
- Shall the prey be taken from the mighty, or the lawful captive delivered?
- World English Bible (WEB)
- Shall the plunder be taken from the mighty, or the lawful captives be delivered?
- American Standard Version (ASV)
- Shall the prey be taken from the mighty, or the lawful captives be delivered?
- Bible in Basic English (BBE)
- Will the goods of war be taken from the strong man, or the prisoners of the cruel one be let go?
- Darby Translation (DBY)
- Shall the prey be taken from the mighty? and shall he that is rightfully captive be delivered?
- Webster's Bible (WBS)
- Shall the prey be taken from the mighty, or the lawful captive delivered?
- Young's Literal Translation (YLT)
- Is prey taken from the mighty? And the captive of the righteous delivered?
Read in context
- 22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- 23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- 24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
- 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- 26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
Cross references
- Luke 11:21–22 ಲೂಕನು 11:21–22ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
- Psalm 124:6–7 ಕೀರ್ತನೆಗಳು 124:6–7ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ. ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Matthew 12:29 ಮತ್ತಾಯನು 12:29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
- Ezekiel 37:3 ಯೆಹೆಜ್ಕೇಲನು 37:3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
- Isaiah 42:22 ಯೆಶಾಯ 42:22ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
- Ezra 9:13 ಎಜ್ರನು 9:13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
- Ezra 9:9 ಎಜ್ರನು 9:9ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
- Psalm 126:1–3 ಕೀರ್ತನೆಗಳು 126:1–3ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- Nehemiah 9:37 ನೆಹೆಮೀಯ 9:37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Jeremiah 25:6–9 ಯೆರೆಮೀಯ 25:6–9ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು. ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ. ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ-- ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.