Isaiah · chapter 5 · verse 12
Isaiah 5:12 in Kannada
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
Avara habbagalalli kinnari, veene, dammadi, kolalu draakshaarasavu iruvavu; aadare kartana kelasavannu avaru lakshisaru illave aatana kaikelasavannu aalochisuvadilla.
Isaiah 5:12 in English
- King James Version (KJV)
- And the harp, and the viol, the tabret, and pipe, and wine, are in their feasts: but they regard not the work of the LORD, neither consider the operation of his hands.
- World English Bible (WEB)
- The harp, lyre, tambourine, and flute, with wine, are at their feasts; but they don’t respect the work of the LORD, neither have they considered the operation of his hands.
- American Standard Version (ASV)
- And the harp and the lute, the tabret and the pipe, and wine, are [in] their feasts; but they regard not the work of Jehovah, neither have they considered the operation of his hands.
- Bible in Basic English (BBE)
- And corded instruments and wind-instruments and wine are in their feasts: but they give no thought to the work of the Lord, and they are not interested in what his hands are doing.
- Darby Translation (DBY)
- And harp and lyre, tambour and flute, and wine are in their banquets; but they regard not the work of Jehovah, nor do they see the operation of his hands.
- Webster's Bible (WBS)
- And the harp, and the viol, the tabret, and pipe, and wine, are in their feasts: but they regard not the work of the LORD, neither consider the operation of his hands.
- Young's Literal Translation (YLT)
- And harp, and psaltery, tabret, and pipe, And wine, have been their banquets, And the work of Jehovah they behold not, Yea, the work of His hands they have not seen.
Read in context
- 10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- 11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- 12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- 13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- 14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
Cross references
- Psalm 28:5 ಕೀರ್ತನೆಗಳು 28:5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
- Job 21:11–14 ಯೋಬನು 21:11–14ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- Amos 6:4–6 ಆಮೋಸ 6:4–6ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Job 34:27 ಯೋಬನು 34:27ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Isaiah 5:19 ಯೆಶಾಯ 5:19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- Psalm 92:5–6 ಕೀರ್ತನೆಗಳು 92:5–6ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ. ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Isaiah 22:13 ಯೆಶಾಯ 22:13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Luke 16:19 ಲೂಕನು 16:19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- Genesis 31:27 ಆದಿಕಾಂಡ 31:27ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
- Hosea 4:10–11 ಹೋಶೇಯ 4:10–11ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ. ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.