Isaiah · chapter 5 · verse 14
Isaiah 5:14 in Kannada
ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
Heegiruvadarinda paataalavu tanage taane doddadaagi mitiyilladashtu tanna baayiyannu tereyalu avara mahime, samoo havu, kolaahala, ullaasapaduvadu ivellavoo adaralli beeluvavu.
Isaiah 5:14 in English
- King James Version (KJV)
- Therefore hell hath enlarged herself, and opened her mouth without measure: and their glory, and their multitude, and their pomp, and he that rejoiceth, shall descend into it.
- World English Bible (WEB)
- Therefore Sheol has enlarged its desire, and opened its mouth without measure; and their glory, their multitude, their pomp, and he who rejoices among them, descend into it.
- American Standard Version (ASV)
- Therefore Sheol hath enlarged its desire, and opened its mouth without measure; and their glory, and their multitude, and their pomp, and he that rejoiceth among them, descend [into it].
- Bible in Basic English (BBE)
- For this cause the underworld has made wide its throat, opening its mouth without limit: and her glory, and the noise of her masses, and her loud-voiced feasters, will go down into it.
- Darby Translation (DBY)
- Therefore doth Sheol enlarge its desire, and open its mouth without measure; and her splendour shall descend [into it], and her multitude, and her tumult, and [all] that is joyful within her.
- Webster's Bible (WBS)
- Therefore hell hath enlarged herself, and opened her mouth without measure: and their glory, and their multitude, and their pomp, and he that rejoiceth, shall descend into it.
- Young's Literal Translation (YLT)
- Therefore hath Sheol enlarged herself, And hath opened her mouth without limit. And gone down hath its honour, and its multitude, And its noise, and its exulting one — into her.
Read in context
- 12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- 13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- 14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
- 15ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
- 16ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
Cross references
- Proverbs 30:16 ಜ್ಞಾನೋಕ್ತಿಗಳು 30:16ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Habakkuk 2:5 ಹಬಕ್ಕೂಕ 2:5ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
- Psalm 55:15 ಕೀರ್ತನೆಗಳು 55:15ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Revelation 20:13–15 ಪ್ರಕಟನೆ 20:13–15ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Proverbs 27:20 ಜ್ಞಾನೋಕ್ತಿಗಳು 27:20ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
- Matthew 7:13 ಮತ್ತಾಯನು 7:13ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
- Isaiah 14:9 ಯೆಶಾಯ 14:9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- Numbers 16:30–34 ಅರಣ್ಯಕಾಂಡ 16:30–34ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- Ezekiel 32:18–30 ಯೆಹೆಜ್ಕೇಲನು 32:18–30ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು. ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ. ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
- Luke 16:20–23 ಲೂಕನು 16:20–23ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.