Isaiah · chapter 5 · verse 19
Isaiah 5:19 in Kannada
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
Naavu aatana kelasavannu noduvante aatanu tvareyaagi adannu begane maadali; naavu israa yelina parishuddhana aalochaneyannu tiluko lluva haage adu saviాpisi barali endu helu vavarige ayyo!
Isaiah 5:19 in English
- King James Version (KJV)
- That say, Let him make speed, [and] hasten his work, that we may see [it:] and let the counsel of the Holy One of Israel draw nigh and come, that we may know [it]!
- World English Bible (WEB)
- who say, “Let him make haste, let him hasten his work, that we may see it; let the counsel of the Holy One of Israel draw near and come, that we may know it!”
- American Standard Version (ASV)
- that say, Let him make speed, let him hasten his work, that we may see it; and let the counsel of the Holy One of Israel draw nigh and come, that we may know it!
- Bible in Basic English (BBE)
- Who say, Let him do his work quickly, let him make it sudden, so that we may see it: let the design of the Holy One of Israel come near, so that it may be clear to us.
- Darby Translation (DBY)
- who say, Let him hasten, let him speed his work, that we may see [it]; and let the counsel of the Holy One of Israel draw nigh and come, that we may know it!
- Webster's Bible (WBS)
- That say, Let him make speed, [and] hasten his work, that we may see [it] : and let the counsel of the Holy One of Israel draw nigh and come, that we may know [it] !
- Young's Literal Translation (YLT)
- Who are saying, 'Let Him hurry, Let Him hasten His work, that we may see, And let the counsel of the Holy One of Israel Draw near and come, and we know.'
Read in context
- 17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
- 18ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
- 19ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
- 20ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
- 21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
Cross references
- Ezekiel 12:22 ಯೆಹೆಜ್ಕೇಲನು 12:22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
- Jeremiah 17:15 ಯೆರೆಮೀಯ 17:15ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
- 2 Peter 3:3–4 2 ಪೇತ್ರನು 3:3–4ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು-- ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆ ಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ ಎಂದು ಹೇಳುವರೆಂಬದಾಗಿ ನೀವು ಮೊದಲು ತಿಳುಕೊಳ್ಳ ಬೇಕು.
- Amos 5:18–19 ಆಮೋಸ 5:18–19ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ. ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- Jeremiah 23:36 ಯೆರೆಮೀಯ 23:36ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
- Jeremiah 5:12–13 ಯೆರೆಮೀಯ 5:12–13ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ. ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- Isaiah 30:11 ಯೆಶಾಯ 30:11ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- Jeremiah 23:18 ಯೆರೆಮೀಯ 23:18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
- Ezekiel 12:27 ಯೆಹೆಜ್ಕೇಲನು 12:27ಮನುಷ್ಯಪುತ್ರನೇ, ಇಗೋ, ಇಸ್ರಾಯೇಲಿನ ಮನೆತನದವರು--ಇವನಿಗಾದ ದರ್ಶನವು ಬಹು ದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆಂದು ಹೇಳುತ್ತಾರೆ.ಆದದರಿಂದ ಅವರು ಹೀಗೆ ಹೇಳುವರೆಂದು ದೇವರಾದ ಕರ್ತನು ಹೇಳುತ್ತಾನೆ; ನನ್ನ ಮಾತುಗಳಲ್ಲಿ ಒಂದಾದರೂ ಇನ್ನು ಮೇಲೆ ದೂರವಾಗುವದಿಲ್ಲ; ನಾನು ಆಡಿದ ಮಾತು ನಡಿಸಲ್ಪಡುವದೆಂದು ದೇವರಾದ ಕರ್ತನು ಹೇಳುತ್ತಾನೆ.