Isaiah · chapter 5 · verse 8
Isaiah 5:8 in Kannada
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
Sthala migisade neevu bhoomiya madhyadalli ontiyaagi vaasisuvante manege mane koodisi holakke hola serisuvavarige ayyo!
Isaiah 5:8 in English
- King James Version (KJV)
- Woe unto them that join house to house, [that] lay field to field, till [there be] no place, that they may be placed alone in the midst of the earth!
- World English Bible (WEB)
- Woe to those who join house to house, who lay field to field, until there is no room, and you are made to dwell alone in the middle of the land!
- American Standard Version (ASV)
- Woe unto them that join house to house, that lay field to field, till there be no room, and ye be made to dwell alone in the midst of the land!
- Bible in Basic English (BBE)
- Cursed are those who are joining house to house, and putting field to field, till there is no more living-space for any but themselves in all the land!
- Darby Translation (DBY)
- Woe unto them that add house to house, that join field to field, until there is no more room, and that ye dwell yourselves alone in the midst of the land!
- Webster's Bible (WBS)
- Woe to them that join house to house, [that] lay field to field, till [there is] no place, that they may be placed alone in the midst of the earth!
- Young's Literal Translation (YLT)
- Woe [to] those joining house to house, Field to field they bring near, till there is no place, And ye have been settled by yourselves In the midst of the land!
Read in context
- 6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- 7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- 8ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
- 9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
- 10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
Cross references
- Micah 2:2 ಮೀಕ 2:2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Habakkuk 2:9–12 ಹಬಕ್ಕೂಕ 2:9–12ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- Jeremiah 22:13–17 ಯೆರೆಮೀಯ 22:13–17ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ! ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ! ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ? ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Luke 12:16–24 ಲೂಕನು 12:16–24ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು. ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು. ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
- 1 Kings 21:16–20 1 ಅರಸುಗಳು 21:16–20ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು. ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು-- ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು. ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- Ezekiel 11:15 ಯೆಹೆಜ್ಕೇಲನು 11:15ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ಹೌದು, ನಿನ್ನ ಸಹೋದರರಿಗೆ, ನಿನ್ನ ಸಮಸ್ತ ಬಂಧು ಗಳಿಗೆ, ಇಸ್ರಾಯೇಲಿನ ಮನೆತನದವರಿಗೆ, ಇವರೆಲ್ಲ ರಿಗೆ ಯೆರೂಸಲೇಮಿನ ನಿವಾಸಿಗಳು--ಕರ್ತನಿಂದ ದೂರ ಹೋಗಿರಿ, ಈ ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳಿದರು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Ezekiel 33:24 ಯೆಹೆಜ್ಕೇಲನು 33:24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.