Isaiah · chapter 50 · verse 5
Isaiah 50:5 in Kannada
ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
Kartanaada devaru nanna kiviyannu terediddaane. Naanu edurubeelalilla illave vimukhanaagaloo illa.
Isaiah 50:5 in English
- King James Version (KJV)
- The Lord GOD hath opened mine ear, and I was not rebellious, neither turned away back.
- World English Bible (WEB)
- The Lord GOD has opened my ear. I was not rebellious. I have not turned back.
- American Standard Version (ASV)
- The Lord Jehovah hath opened mine ear, and I was not rebellious, neither turned away backward.
- Bible in Basic English (BBE)
- And I have not put myself against him, or let my heart be turned back from him.
- Darby Translation (DBY)
- The Lord Jehovah hath opened mine ear, and I was not rebellious; I turned not away back.
- Webster's Bible (WBS)
- The LORD GOD opened my ear, and I was not rebellious, neither turned away back.
- Young's Literal Translation (YLT)
- The Lord Jehovah opened for me the ear, And I rebelled not — backward I moved not.
Read in context
- 3ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
- 4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- 5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
- 6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- 7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
Cross references
- John 14:31 ಯೋಹಾನನು 14:31ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- Hebrews 5:8 ಇಬ್ರಿಯರಿಗೆ 5:8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
- Philippians 2:8 ಫಿಲಿಪ್ಪಿಯವರಿಗೆ 2:8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Isaiah 35:5 ಯೆಶಾಯ 35:5ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
- John 8:29 ಯೋಹಾನನು 8:29ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Isaiah 48:8 ಯೆಶಾಯ 48:8ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- Psalm 40:6–8 ಕೀರ್ತನೆಗಳು 40:6–8ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ; ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Acts 26:19 ಅಪೊಸ್ತಲರ ಕೃತ್ಯಗಳು 26:19ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- Hebrews 10:5–9 ಇಬ್ರಿಯರಿಗೆ 10:5–9ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.