Isaiah · chapter 51 · verse 12
Isaiah 51:12 in Kannada
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
Naane, naane ninnannu aadarisuvavanaagi ddene; haagaadare saayuva manushyanigoo hullinante maadalpattiruva naraputranigoo bhaya paduva neenu yaaru?
Isaiah 51:12 in English
- King James Version (KJV)
- I, [even] I, [am] he that comforteth you: who [art] thou, that thou shouldest be afraid of a man [that] shall die, and of the son of man [which] shall be made [as] grass;
- World English Bible (WEB)
- “I, even I, am he who comforts you. Who are you, that you are afraid of man who shall die, and of the son of man who will be made as grass?
- American Standard Version (ASV)
- I, even I, am he that comforteth you: who art thou, that thou art afraid of man that shall die, and of the son of man that shall be made as grass;
- Bible in Basic English (BBE)
- I, even I, am your comforter: are you so poor in heart as to be in fear of man who will come to an end, and of the son of man who will be like grass?
- Darby Translation (DBY)
- I, [even] I, am he that comforteth you: who art thou, that thou fearest a man that shall die, and the son of man that shall become as grass;
- Webster's Bible (WBS)
- I, [even] I, [am] he that comforteth you: who [art] thou, that thou shouldest be afraid of a man [that] shall die, and of the son of man [who] shall be made [as] grass;
- Young's Literal Translation (YLT)
- I — I [am] He — your comforter, Who [art] thou — and thou art afraid of man? he dieth! And of the son of man — grass he is made!
Read in context
- 10ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- 11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- 12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- 13ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- 14ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
Cross references
- Psalm 118:6 ಕೀರ್ತನೆಗಳು 118:6ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
- 1 Peter 1:24 1 ಪೇತ್ರನು 1:24ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- John 14:26–27 ಯೋಹಾನನು 14:26–27ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು. ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- John 14:18 ಯೋಹಾನನು 14:18ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
- 2 Corinthians 1:3–5 2 ಕೊರಿಂಥದವರಿಗೆ 1:3–5ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- James 1:10–11 ಯಾಕೋಬನು 1:10–11ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Isaiah 66:13 ಯೆಶಾಯ 66:13ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
- Isaiah 57:15–18 ಯೆಶಾಯ 57:15–18ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ. ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು. ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- Luke 12:4–5 ಲೂಕನು 12:4–5ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Matthew 10:28 ಮತ್ತಾಯನು 10:28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.