Isaiah · chapter 51 · verse 20
Isaiah 51:20 in Kannada
ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
Ninna kumaararu moorchhe hogi, balege sikkida kaadu gooligalante ellaa beedigalu kooduva chaukadalli avaru biddiddaare; avaru kartana ugradindaloo ninna devara gadarike yindaloo tumbiddaare.
Isaiah 51:20 in English
- King James Version (KJV)
- Thy sons have fainted, they lie at the head of all the streets, as a wild bull in a net: they are full of the fury of the LORD, the rebuke of thy God.
- World English Bible (WEB)
- Your sons have fainted. They lie at the head of all the streets, like an antelope in a net. They are full of the LORD’s wrath, the rebuke of your God.
- American Standard Version (ASV)
- Thy sons have fainted, they lie at the head of all the streets, as an antelope in a net; they are full of the wrath of Jehovah, the rebuke of thy God.
- Bible in Basic English (BBE)
- Your sons are overcome, like a roe in a net; they are full of the wrath of the Lord, the punishment of your God.
- Darby Translation (DBY)
- Thy children have fainted, they lie at the head of all the streets, as an oryx in a net: they are full of the fury of Jehovah, the rebuke of thy God.
- Webster's Bible (WBS)
- Thy sons have fainted, they lie at the head of all the streets, as a wild bull in a net: they are full of the fury of the LORD, the rebuke of thy God.
- Young's Literal Translation (YLT)
- Thy sons have been wrapped up, they have lain down, At the head of all out places, as a wild ox [in] a net, They are full of the fury of Jehovah, The rebuke of Thy God.
Read in context
- 18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
- 19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
- 20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
- 21ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
- 22ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
Cross references
- Revelation 16:9–11 ಪ್ರಕಟನೆ 16:9–11ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Lamentations 2:11–12 ಪ್ರಲಾಪಗಳು 2:11–12ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ. ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
- Ezekiel 12:13 ಯೆಹೆಜ್ಕೇಲನು 12:13ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- Lamentations 1:15 ಪ್ರಲಾಪಗಳು 1:15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
- Lamentations 3:15–16 ಪ್ರಲಾಪಗಳು 3:15–16ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ. ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
- Isaiah 51:21 ಯೆಶಾಯ 51:21ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
- Isaiah 49:26 ಯೆಶಾಯ 49:26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Ezekiel 17:20 ಯೆಹೆಜ್ಕೇಲನು 17:20ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- Lamentations 5:13 ಪ್ರಲಾಪಗಳು 5:13ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು.
- Isaiah 51:17 ಯೆಶಾಯ 51:17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
- Lamentations 4:2 ಪ್ರಲಾಪಗಳು 4:2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
- Lamentations 1:19 ಪ್ರಲಾಪಗಳು 1:19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.