Isaiah · chapter 51 · verse 4
Isaiah 51:4 in Kannada
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
Nanna janare, keliri; nanna janaangave, nanna kadege kivigodiri; nyaayapramaanavu nanninda horaduvadu mattu nanna nyaayavannu janarige belakannaagi maaduvenu.
Isaiah 51:4 in English
- King James Version (KJV)
- Hearken unto me, my people; and give ear unto me, O my nation: for a law shall proceed from me, and I will make my judgment to rest for a light of the people.
- World English Bible (WEB)
- “Listen to me, my people; and hear me, my nation, for a law will go out from me, and I will establish my justice for a light to the peoples.
- American Standard Version (ASV)
- Attend unto me, O my people; and give ear unto me, O my nation: for a law shall go forth from me, and I will establish my justice for a light of the peoples.
- Bible in Basic English (BBE)
- Give attention to me, O my people; and give ear to me, O my nation; for teaching will go out from me, and the knowledge of the true God will be a light to the peoples.
- Darby Translation (DBY)
- Listen unto me, my people; and give ear unto me, my nation: for a law shall proceed from me, and I will establish my judgment for a light of the peoples.
- Webster's Bible (WBS)
- Hearken to me, my people; and give ear to me, O my nation: for a law shall proceed from me, and I will make my judgment to rest for a light of the people.
- Young's Literal Translation (YLT)
- Attend unto Me, O My people, And, O My nation, unto Me give ear. For a law from Me goeth out, And My judgment to the light, Peoples I do cause to rest.
Read in context
- 2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- 3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- 4ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
- 5ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
- 6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- 1 Corinthians 9:21 1 ಕೊರಿಂಥದವರಿಗೆ 9:21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Isaiah 42:6 ಯೆಶಾಯ 42:6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- Micah 4:2 ಮೀಕ 4:2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Psalm 78:1 ಕೀರ್ತನೆಗಳು 78:1ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
- Exodus 19:6 ವಿಮೋಚನಕಾಂಡ 19:6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Psalm 106:5 ಕೀರ್ತನೆಗಳು 106:5ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
- Psalm 33:12 ಕೀರ್ತನೆಗಳು 33:12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
- John 16:8–11 ಯೋಹಾನನು 16:8–11ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- Isaiah 42:1–4 ಯೆಶಾಯ 42:1–4ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.