Isaiah · chapter 52 · verse 12
Isaiah 52:12 in Kannada
ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
Neevu tvareyaagi hoguvadilla; illave haaruvada rindaloo hoguvadilla; yaakandare kartane nimma munde hoguvanu; israayelina devaru nimma bahumaanavaagiruvanu.
Isaiah 52:12 in English
- King James Version (KJV)
- For ye shall not go out with haste, nor go by flight: for the LORD will go before you; and the God of Israel [will be] your rereward.
- World English Bible (WEB)
- For you shall not go out in haste, neither shall you go by flight; for the LORD will go before you, and the God of Israel will be your rear guard.
- American Standard Version (ASV)
- For ye shall not go out in haste, neither shall ye go by flight: for Jehovah will go before you; and the God of Israel will be your rearward.
- Bible in Basic English (BBE)
- For you will not go out suddenly, and you will not go in flight: for the Lord will go before you, and the God of Israel will come after you to keep you.
- Darby Translation (DBY)
- For ye shall not go out with haste, nor go by flight; for Jehovah will go before you, and the God of Israel will be your rear-guard.
- Webster's Bible (WBS)
- For ye shall not go out with haste, nor go by flight: for the LORD will go before you; and the God of Israel [will be] your rear-ward.
- Young's Literal Translation (YLT)
- For not in haste do ye go out, Yea, with flight ye go not on, For going before you [is] Jehovah, And gathering you [is] the God of Israel!
Read in context
- 10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- 11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- 12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- 13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
- 14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
Cross references
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Deuteronomy 20:4 ಧರ್ಮೋಪದೇಶಕಾಂಡ 20:4ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
- Exodus 14:19–20 ವಿಮೋಚನಕಾಂಡ 14:19–20ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Exodus 13:21–22 ವಿಮೋಚನಕಾಂಡ 13:21–22ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ. ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
- Isaiah 45:2 ಯೆಶಾಯ 45:2ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
- Exodus 12:11 ವಿಮೋಚನಕಾಂಡ 12:11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
- Micah 2:13 ಮೀಕ 2:13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Numbers 10:25 ಅರಣ್ಯಕಾಂಡ 10:25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
- 1 Chronicles 14:15 1 ಪೂರ್ವಕಾಲವೃತ್ತಾಂತ 14:15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
- Judges 4:14 ನ್ಯಾಯಸ್ಥಾಪಕರು 4:14ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.