Isaiah · chapter 52 · verse 6
Isaiah 52:6 in Kannada
ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.
Aadadarinda nanna janaru nanna hesarannu tilidukolluvaru; heege aa dinadalli maatanaadidaatanu naane, igo, adu naane endu avaru grahisuvaru.
Isaiah 52:6 in English
- King James Version (KJV)
- Therefore my people shall know my name: therefore [they shall know] in that day that I [am] he that doth speak: behold, [it is] I.
- World English Bible (WEB)
- Therefore my people shall know my name. Therefore they shall know in that day that I am he who speaks. Behold, it is I.”
- American Standard Version (ASV)
- Therefore my people shall know my name: therefore [they shall know] in that day that I am he that doth speak; behold, it is I.
- Bible in Basic English (BBE)
- For this cause I will make my name clear to my people; in that day they will be certain that it is my word which comes to them; see, here am I.
- Darby Translation (DBY)
- Therefore my people shall know my name; therefore [they shall know] in that day that I [am] HE, that saith, Here am I.
- Webster's Bible (WBS)
- Therefore my people shall know my name: therefore [they shall know] in that day that I [am] he that doth speak: behold, [it is] I.
- Young's Literal Translation (YLT)
- Therefore doth My people know My name, Therefore, in that day, Surely I [am] He who is speaking, behold Me.'
Read in context
- 4ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.
- 5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- 6ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.
- 7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
- 8ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
Cross references
- Ezekiel 37:13–14 ಯೆಹೆಜ್ಕೇಲನು 37:13–14ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- Ezekiel 20:44 ಯೆಹೆಜ್ಕೇಲನು 20:44ಇದಲ್ಲದೆ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗ ಗಳ ಪ್ರಕಾರವಲ್ಲ, ನಿಮ್ಮ ದುಷ್ಕ್ರಿಯೆಗಳ ಪ್ರಕಾರವಲ್ಲ, ನನ್ನ ಹೆಸರಿಗೋಸ್ಕರವೇ ನಿಮಗೆ ಮಾಡಿದಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Hebrews 8:10–11 ಇಬ್ರಿಯರಿಗೆ 8:10–11ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
- Zechariah 10:9–12 ಜೆಕರ್ಯ 10:9–12ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು. ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು. ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ. ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Exodus 33:19 ವಿಮೋಚನಕಾಂಡ 33:19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Ezekiel 39:27–29 ಯೆಹೆಜ್ಕೇಲನು 39:27–29ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು; ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 48:10 ಕೀರ್ತನೆಗಳು 48:10ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
- Exodus 34:5–7 ವಿಮೋಚನಕಾಂಡ 34:5–7ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Hebrews 6:14–18 ಇಬ್ರಿಯರಿಗೆ 6:14–18ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Isaiah 42:9 ಯೆಶಾಯ 42:9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.