Isaiah · chapter 52 · verse 9
Isaiah 52:9 in Kannada
ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
Yeroosalemina haalaada sthalagale, aananda dhvanigaiyiri ottaagi haadiri; yaakandare kartanu tanna prajegalannu aadarisiddaane, aatanu yeroosa lemannu vimochisiddaane.
Isaiah 52:9 in English
- King James Version (KJV)
- Break forth into joy, sing together, ye waste places of Jerusalem: for the LORD hath comforted his people, he hath redeemed Jerusalem.
- World English Bible (WEB)
- Break out into joy! Sing together, you waste places of Jerusalem; for the LORD has comforted his people. He has redeemed Jerusalem.
- American Standard Version (ASV)
- Break forth into joy, sing together, ye waste places of Jerusalem; for Jehovah hath comforted his people, he hath redeemed Jerusalem.
- Bible in Basic English (BBE)
- Give sounds of joy, make melody together, waste places of Jerusalem: for the Lord has given comfort to his people, he has taken up the cause of Jerusalem.
- Darby Translation (DBY)
- Break forth, sing aloud together, waste places of Jerusalem; for Jehovah comforteth his people, he hath redeemed Jerusalem.
- Webster's Bible (WBS)
- Break forth into joy, sing together, ye waste places of Jerusalem: for the LORD hath comforted his people, he hath redeemed Jerusalem.
- Young's Literal Translation (YLT)
- Break forth, sing together, O wastes of Jerusalem, For Jehovah hath comforted His people, He hath redeemed Jerusalem.
Read in context
- 7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
- 8ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
- 9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
- 10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- 11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
Cross references
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Psalm 98:4 ಕೀರ್ತನೆಗಳು 98:4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Zephaniah 3:14–15 ಚೆಫನ್ಯ 3:14–15ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
- Isaiah 55:12 ಯೆಶಾಯ 55:12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Isaiah 61:4 ಯೆಶಾಯ 61:4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
- Isaiah 14:7 ಯೆಶಾಯ 14:7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
- Isaiah 44:23 ಯೆಶಾಯ 44:23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
- Psalm 96:11–12 ಕೀರ್ತನೆಗಳು 96:11–12ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Isaiah 42:10–11 ಯೆಶಾಯ 42:10–11ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
- Isaiah 44:26 ಯೆಶಾಯ 44:26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ