Isaiah · chapter 53 · verse 2
Isaiah 53:2 in Kannada
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
Aatanu chigurinanteyoo onaneladinda huttibaruva berinanteyoo aatana munde bele yuvanu. Aatanige yaava roopavaagali andavaa gali iralilla; naavu aatanannu nodidaaga alli naavu apekshisuvantha yaava chandavoo iralilla.
Isaiah 53:2 in English
- King James Version (KJV)
- For he shall grow up before him as a tender plant, and as a root out of a dry ground: he hath no form nor comeliness; and when we shall see him, [there is] no beauty that we should desire him.
- World English Bible (WEB)
- For he grew up before him as a tender plant, and as a root out of dry ground. He has no good looks or majesty. When we see him, there is no beauty that we should desire him.
- American Standard Version (ASV)
- For he grew up before him as a tender plant, and as a root out of a dry ground: he hath no form nor comeliness; and when we see him, there is no beauty that we should desire him.
- Bible in Basic English (BBE)
- For his growth was like that of a delicate plant before him, and like a root out of a dry place: he had no grace of form, to give us pleasure;
- Darby Translation (DBY)
- For he shall grow up before him as a tender sapling, and as a root out of dry ground: he hath no form nor lordliness, and when we see him, there is no beauty that we should desire him.
- Webster's Bible (WBS)
- For he shall grow up before him as a tender plant, and as a root out of a dry ground: he hath no form nor comeliness; and when we shall see him, [there is] no beauty that we should desire him.
- Young's Literal Translation (YLT)
- Yea, he cometh up as a tender plant before Him, And as a root out of a dry land, He hath no form, nor honour, when we observe him, Nor appearance, when we desire him.
Read in context
- 1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
- 2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- 3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- 4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
Cross references
- Philippians 2:6–7 ಫಿಲಿಪ್ಪಿಯವರಿಗೆ 2:6–7ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- Isaiah 52:14 ಯೆಶಾಯ 52:14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- John 1:10–14 ಯೋಹಾನನು 1:10–14ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ. ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ. ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು. ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Mark 6:3 ಮಾರ್ಕನು 6:3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- Ezekiel 17:22–24 ಯೆಹೆಜ್ಕೇಲನು 17:22–24ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ. ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- John 19:14–15 ಯೋಹಾನನು 19:14–15ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Mark 9:12 ಮಾರ್ಕನು 9:12ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- John 19:5 ಯೋಹಾನನು 19:5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
- John 18:40 ಯೋಹಾನನು 18:40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.