Isaiah · chapter 53 · verse 5
Isaiah 53:5 in Kannada
ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
Namma drohagala nimitta aatanige gaayavaayitu, namma dushkrutyagala nimitta aatanu jajjalpattanu; namma samaadhaanakke kaaranavaada shiksheyu aatana mele bittu; aatana baasunde galinda namage svasthavaayitu.
Isaiah 53:5 in English
- King James Version (KJV)
- But he [was] wounded for our transgressions, [he was] bruised for our iniquities: the chastisement of our peace [was] upon him; and with his stripes we are healed.
- World English Bible (WEB)
- But he was pierced for our transgressions. He was crushed for our iniquities. The punishment that brought our peace was on him; and by his wounds we are healed.
- American Standard Version (ASV)
- But he was wounded for our transgressions, he was bruised for our iniquities; the chastisement of our peace was upon him; and with his stripes we are healed.
- Bible in Basic English (BBE)
- But it was for our sins he was wounded, and for our evil doings he was crushed: he took the punishment by which we have peace, and by his wounds we are made well.
- Darby Translation (DBY)
- But he was wounded for our transgressions, he was bruised for our iniquities; the chastisement of our peace was upon him, and with his stripes we are healed.
- Webster's Bible (WBS)
- But he [was] wounded for our transgression, [he was] bruised for our iniquities: the chastisement of our peace [was] upon him; and with his stripes we are healed.
- Young's Literal Translation (YLT)
- And he is pierced for our transgressions, Bruised for our iniquities, The chastisement of our peace [is] on him, And by his bruise there is healing to us.
Read in context
- 3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- 4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
- 5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- 6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- 7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
Cross references
- 1 Peter 2:24–25 1 ಪೇತ್ರನು 2:24–25ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ. ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Romans 5:6–10 ರೋಮಾಪುರದವರಿಗೆ 5:6–10ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- Isaiah 53:10–12 ಯೆಶಾಯ 53:10–12ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Hebrews 10:14 ಇಬ್ರಿಯರಿಗೆ 10:14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- Romans 4:25 ರೋಮಾಪುರದವರಿಗೆ 4:25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Hebrews 9:12–15 ಇಬ್ರಿಯರಿಗೆ 9:12–15ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ. ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- Hebrews 10:10 ಇಬ್ರಿಯರಿಗೆ 10:10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- 1 Corinthians 15:3 1 ಕೊರಿಂಥದವರಿಗೆ 15:3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.