Isaiah · chapter 54 · verse 3
Isaiah 54:3 in Kannada
ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
Neenu balagadegoo eda gadegoo habbikolluvi; ninna santaanavu anya janaangagalannu vashapadisikondu haalaada pattana galannu nivaasavaagamaaduvadu.
Isaiah 54:3 in English
- King James Version (KJV)
- For thou shalt break forth on the right hand and on the left; and thy seed shall inherit the Gentiles, and make the desolate cities to be inhabited.
- World English Bible (WEB)
- For you will spread out on the right hand and on the left; and your offspring will possess the nations and settle in desolate cities.
- American Standard Version (ASV)
- For thou shalt spread abroad on the right hand and on the left; and thy seed shall possess the nations, and make the desolate cities to be inhabited.
- Bible in Basic English (BBE)
- For I will make wide your limits on the right hand and on the left; and your seed will take the nations for a heritage, and make the waste towns full of people.
- Darby Translation (DBY)
- For thou shalt spread abroad on the right hand and on the left; and thy seed shall possess nations, and they shall make desolate cities to be inhabited.
- Webster's Bible (WBS)
- For thou shalt break forth on the right hand and on the left; and thy seed shall inherit the Gentiles, and make the desolate cities to be inhabited.
- Young's Literal Translation (YLT)
- For right and left thou breakest forth, And thy seed doth nations possess,
Read in context
- 1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
- 2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
- 3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
- 4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- 5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
Cross references
- Ezekiel 36:35–36 ಯೆಹೆಜ್ಕೇಲನು 36:35–36ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು. ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Isaiah 60:3–13 ಯೆಶಾಯ 60:3–13ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
- Psalm 72:8–11 ಕೀರ್ತನೆಗಳು 72:8–11ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Isaiah 49:18–19 ಯೆಶಾಯ 49:18–19ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ. ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
- Isaiah 43:5–6 ಯೆಶಾಯ 43:5–6ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು. ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Isaiah 52:9 ಯೆಶಾಯ 52:9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
- Isaiah 2:2–4 ಯೆಶಾಯ 2:2–4ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Isaiah 42:1–12 ಯೆಶಾಯ 42:1–12ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು. ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ-- ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು. ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ. ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- Isaiah 49:12 ಯೆಶಾಯ 49:12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Isaiah 55:5 ಯೆಶಾಯ 55:5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.