Isaiah · chapter 54 · verse 4
Isaiah 54:4 in Kannada
ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
Hedarabeda, ninage naachikeyaaguvadilla. Illave gaabari padabeda, ninna yauvanada lajjeyannu maretu biduvi ninna vaidhavyadalli ninagaada nindeyannu endigoo ninna jnyaapakakke taruvadilla.
Isaiah 54:4 in English
- King James Version (KJV)
- Fear not; for thou shalt not be ashamed: neither be thou confounded; for thou shalt not be put to shame: for thou shalt forget the shame of thy youth, and shalt not remember the reproach of thy widowhood any more.
- World English Bible (WEB)
- “Don’t be afraid, for you will not be ashamed. Don’t be confounded, for you will not be disappointed. For you will forget the shame of your youth. You will remember the reproach of your widowhood no more.
- American Standard Version (ASV)
- Fear not; for thou shalt not be ashamed: neither be thou confounded; for thou shalt not be put to shame: for thou shalt forget the shame of thy youth; and the reproach of thy widowhood shalt thou remember no more.
- Bible in Basic English (BBE)
- Have no fear; for you will not be shamed or without hope: you will not be put to shame, for the shame of your earlier days will go out of your memory, and you will no longer keep in mind the sorrows of your widowed years.
- Darby Translation (DBY)
- Fear not, for thou shalt not be ashamed; neither be thou confounded, for thou shalt not be put to shame: for thou shalt forget the shame of thy youth, and shalt not remember the reproach of thy widowhood any more.
- Webster's Bible (WBS)
- Fear not; for thou shalt not be ashamed: neither be thou confounded; for thou shalt not be put to shame; for thou shalt forget the shame of thy youth, and shalt not remember the reproach of thy widowhood any more.
- Young's Literal Translation (YLT)
- And desolate cities they cause to be inhabited. Fear not, for thou art not ashamed, Nor blush, for thou art not confounded, For the shame of thy youth thou forgettest, And the reproach of thy widowhood Thou dost not remember any more.
Read in context
- 2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
- 3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
- 4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- 5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- 6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
Cross references
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- 1 Peter 2:6 1 ಪೇತ್ರನು 2:6ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
- Jeremiah 31:19 ಯೆರೆಮೀಯ 31:19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- Isaiah 61:7 ಯೆಶಾಯ 61:7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- Isaiah 51:7 ಯೆಶಾಯ 51:7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- Isaiah 45:16–17 ಯೆಶಾಯ 45:16–17ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು. ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Ezekiel 16:60–63 ಯೆಹೆಜ್ಕೇಲನು 16:60–63ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Hosea 3:1–5 ಹೋಶೇಯ 3:1–5ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Ezekiel 16:43 ಯೆಹೆಜ್ಕೇಲನು 16:43ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
- Ezekiel 16:22 ಯೆಹೆಜ್ಕೇಲನು 16:22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.