Isaiah · chapter 55 · verse 6
Isaiah 55:6 in Kannada
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
Kartanu sikkuva kaaladalli aatanannu hudukiri; aatanu saviాpavaagiruvaagale aatanannu kareyiri.
Isaiah 55:6 in English
- King James Version (KJV)
- Seek ye the LORD while he may be found, call ye upon him while he is near:
- World English Bible (WEB)
- Seek the LORD while he may be found. Call on him while he is near.
- American Standard Version (ASV)
- Seek ye Jehovah while he may be found; call ye upon him while he is near:
- Bible in Basic English (BBE)
- Make search for the Lord while he is there, make prayer to him while he is near:
- Darby Translation (DBY)
- Seek ye Jehovah while he may be found, call ye upon him while he is near.
- Webster's Bible (WBS)
- Seek ye the LORD while he may be found, call ye upon him while he is near:
- Young's Literal Translation (YLT)
- Seek ye Jehovah, while He is found, Call ye Him, while He is near,
Read in context
- 4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- 5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- 6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- 7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- 8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
Cross references
- Jeremiah 29:12–14 ಯೆರೆಮೀಯ 29:12–14ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Psalm 145:18 ಕೀರ್ತನೆಗಳು 145:18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- Psalm 32:6 ಕೀರ್ತನೆಗಳು 32:6ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
- Psalm 14:2 ಕೀರ್ತನೆಗಳು 14:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- 2 Corinthians 6:1–2 2 ಕೊರಿಂಥದವರಿಗೆ 6:1–2ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Amos 5:6 ಆಮೋಸ 5:6ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
- Psalm 27:8 ಕೀರ್ತನೆಗಳು 27:8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- 1 Chronicles 28:9 1 ಪೂರ್ವಕಾಲವೃತ್ತಾಂತ 28:9ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.