Isaiah · chapter 55 · verse 7
Isaiah 55:7 in Kannada
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
Dushtanu tanna maargavannoo aneetivantanu tanna aalochanegalannoo toredubittu kartana kadege hintirugali; aatanu avana mele karuneyidu vanu; namma devara baligoo hintirugali, aatanu heralavaagi kshamisuvanu.
Isaiah 55:7 in English
- King James Version (KJV)
- Let the wicked forsake his way, and the unrighteous man his thoughts: and let him return unto the LORD, and he will have mercy upon him; and to our God, for he will abundantly pardon.
- World English Bible (WEB)
- Let the wicked forsake his way, and the unrighteous man his thoughts. Let him return to the LORD, and he will have mercy on him, to our God, for he will freely pardon.
- American Standard Version (ASV)
- let the wicked forsake his way, and the unrighteous man his thoughts; and let him return unto Jehovah, and he will have mercy upon him; and to our God, for he will abundantly pardon.
- Bible in Basic English (BBE)
- Let the sinner give up his way, and the evil-doer his purpose: and let him come back to the Lord, and he will have mercy on him; and to our God, for there is full forgiveness with him.
- Darby Translation (DBY)
- Let the wicked forsake his way, and the unrighteous man his thoughts; and let him return unto Jehovah, and he will have mercy upon him; and to our God, for he will abundantly pardon.
- Webster's Bible (WBS)
- Let the wicked forsake his way, and the unrighteous man his thoughts: and let him return to the LORD, and he will have mercy upon him; and to our God, for he will abundantly pardon.
- Young's Literal Translation (YLT)
- Forsake doth the wicked his way, And the man of iniquity his thoughts, And he returneth to Jehovah, and He pitieth him, And unto our God for He multiplieth to pardon.
Read in context
- 5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- 6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- 7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- 8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
- 9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
Cross references
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- James 4:8–10 ಯಾಕೋಬನು 4:8–10ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Ezekiel 18:21–23 ಯೆಹೆಜ್ಕೇಲನು 18:21–23ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು. ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು. ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Jonah 3:10 ಯೋನ 3:10ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Ezekiel 33:14–16 ಯೆಹೆಜ್ಕೇಲನು 33:14–16ನಾನು ದುಷ್ಟನಿಗೆ--ನೀನು ನಿಶ್ಚಯ ವಾಗಿ ಸಾಯುವಿ ಎಂದು ಹೇಳುವಾಗ ಅವನು ಪಾಪ ದಿಂದ ತಿರುಗಿಕೊಂಡರೆ ಮತ್ತು ನ್ಯಾಯವನ್ನೂ ನೀತಿ ಯನ್ನೂ ಮಾಡಿದರೆ ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು. ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.
- 1 Timothy 1:15–16 1 ತಿಮೊಥೆಯನಿಗೆ 1:15–16ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- 2 Chronicles 7:14 2 ಪೂರ್ವಕಾಲವೃತ್ತಾಂತ 7:14ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
- Ezekiel 18:27–32 ಯೆಹೆಜ್ಕೇಲನು 18:27–32ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು. ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು. ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ. ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ. ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?