Isaiah · chapter 56 · verse 1
Isaiah 56:1 in Kannada
ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
Kartanu heegannuttaane--nyaayavannu kaikolliri, neetiyalli nadeyiri; yaakandare nanna rakshaneyu baruvadakkoo nanna neetiyu prakatavaaguvadakkoo saviాpavaagide.
Isaiah 56:1 in English
- King James Version (KJV)
- Thus saith the LORD, Keep ye judgment, and do justice: for my salvation [is] near to come, and my righteousness to be revealed.
- World English Bible (WEB)
- The LORD says: “Maintain justice and do what is right, for my salvation is near and my righteousness will soon be revealed.
- American Standard Version (ASV)
- Thus saith Jehovah, Keep ye justice, and do righteousness; for my salvation is near to come, and my righteousness to be revealed.
- Bible in Basic English (BBE)
- The Lord says, Let your way of life be upright, and let your behaviour be rightly ordered: for my salvation is near, and my righteousness will quickly be seen.
- Darby Translation (DBY)
- Thus saith Jehovah: Keep ye judgment and do righteousness; for my salvation is near to come, and my righteousness to be revealed.
- Webster's Bible (WBS)
- Thus saith the LORD, Keep ye judgment, and do justice: for my salvation [is] near to come, and my righteousness to be revealed.
- Young's Literal Translation (YLT)
- Thus said Jehovah: 'Keep ye judgment, and do righteousness, For near [is] My salvation to come, And My righteousness to be revealed.'
Read in context
- 1ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
- 2ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
- 3ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
Cross references
- Romans 13:11–14 ರೋಮಾಪುರದವರಿಗೆ 13:11–14ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು. ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Psalm 85:9 ಕೀರ್ತನೆಗಳು 85:9ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- Isaiah 1:16–19 ಯೆಶಾಯ 1:16–19ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- Romans 1:17 ರೋಮಾಪುರದವರಿಗೆ 1:17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- Romans 10:6–10 ರೋಮಾಪುರದವರಿಗೆ 10:6–10ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು? ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ. ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
- Psalm 24:4–6 ಕೀರ್ತನೆಗಳು 24:4–6ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ. ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು. ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Matthew 4:17 ಮತ್ತಾಯನು 4:17ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
- Isaiah 51:5 ಯೆಶಾಯ 51:5ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
- Luke 3:3–9 ಲೂಕನು 3:3–9ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು? ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.