Isaiah · chapter 57 · verse 16
Isaiah 57:16 in Kannada
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
Naanu endendigoo vyaajya vaaduvadilla, illave yaavaagaloo kopisi kollenu. Yaakandare aatmavoo naanu untu maadida jeevavoo nanninda kundi hodaavu.
Isaiah 57:16 in English
- King James Version (KJV)
- For I will not contend for ever, neither will I be always wroth: for the spirit should fail before me, and the souls [which] I have made.
- World English Bible (WEB)
- For I will not contend forever, neither will I always be angry; for the spirit would faint before me, and the souls whom I have made.
- American Standard Version (ASV)
- For I will not contend for ever, neither will I be always wroth; for the spirit would faint before me, and the souls that I have made.
- Bible in Basic English (BBE)
- For I will not give punishment for ever, or be angry without end: for from me breath goes out; and I it was who made the souls.
- Darby Translation (DBY)
- For I will not contend for ever, neither will I be always wroth; for the spirit would fail before me, and the souls [which] I have made.
- Webster's Bible (WBS)
- For I will not contend for ever, neither will I be always wroth: for the spirit would fail before me, and the souls [which] I have made.
- Young's Literal Translation (YLT)
- For, not to the age do I strive, nor for ever am I wroth, For the spirit from before Me is feeble, And the souls I have made.
Read in context
- 14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
- 15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- 16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- 17ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
- 18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
Cross references
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Jeremiah 10:24 ಯೆರೆಮೀಯ 10:24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- Psalm 103:9–16 ಕೀರ್ತನೆಗಳು 103:9–16ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ; ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ. ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ; ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Psalm 85:5 ಕೀರ್ತನೆಗಳು 85:5ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- Psalm 78:38–39 ಕೀರ್ತನೆಗಳು 78:38–39ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ. ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
- Genesis 6:3 ಆದಿಕಾಂಡ 6:3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
- Job 34:14–15 ಯೋಬನು 34:14–15ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ; ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- Jeremiah 38:16 ಯೆರೆಮೀಯ 38:16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--