Isaiah · chapter 57 · verse 20
Isaiah 57:20 in Kannada
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
Aadare dushtaru summaniralaaradantha, adara neerugalu kesarannoo mailigeyannoo kaaru vantha, allakallolavaagiruva samudrada haagi ddaare.dushtarige samaadhaanave illavendu nanna devaru heluttaane.
Isaiah 57:20 in English
- King James Version (KJV)
- But the wicked [are] like the troubled sea, when it cannot rest, whose waters cast up mire and dirt.
- World English Bible (WEB)
- But the wicked are like the troubled sea; for it can’t rest and its waters cast up mire and mud.
- American Standard Version (ASV)
- But the wicked are like the troubled sea; for it cannot rest, and its waters cast up mire and dirt.
- Bible in Basic English (BBE)
- But the evil-doers are like the troubled sea, for which there is no rest, and its waters send up earth and waste.
- Darby Translation (DBY)
- But the wicked are like the troubled sea, which cannot rest, and whose waters cast up mire and dirt.
- Webster's Bible (WBS)
- But the wicked [are] like the troubled sea, when it cannot rest, whose waters cast up mire and dirt.
- Young's Literal Translation (YLT)
- And the wicked [are] as the driven out sea, For to rest it is not able, And its waters cast out filth and mire.
Read in context
- 18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- 19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- 20ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- 21ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
Cross references
- Proverbs 4:16–17 ಜ್ಞಾನೋಕ್ತಿಗಳು 4:16–17ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು. ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Job 18:5–14 ಯೋಬನು 18:5–14ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು. ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು. ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ. ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ. ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು. ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು. ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Jude 1:12 ಯೂದನು 1:12ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
- Job 15:20–24 ಯೋಬನು 15:20–24ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ. ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ. ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ. ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ. ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
- Job 20:11–29 ಯೋಬನು 20:11–29ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು. ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು. ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು. ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು. ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು. ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ. ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು. ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು. ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ. ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.