Isaiah · chapter 57 · verse 4
Isaiah 57:4 in Kannada
ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
Yaara vishayadalli kuchodya maadutteeri? Yaara vishayavaagi neevu baayi agala maadi naaligeyannu chaachutteeri?
Isaiah 57:4 in English
- King James Version (KJV)
- Against whom do ye sport yourselves? against whom make ye a wide mouth, [and] draw out the tongue? [are] ye not children of transgression, a seed of falsehood,
- World English Bible (WEB)
- Whom do you mock? Against whom do you make a wide mouth and stick out your tongue? Aren’t you children of disobedience and offspring of falsehood,
- American Standard Version (ASV)
- Against whom do ye sport yourselves? against whom make ye a wide mouth, and put out the tongue? are ye not children of transgression, a seed of falsehood,
- Bible in Basic English (BBE)
- Of whom do you make sport? against whom is your mouth open wide and your tongue put out? are you not uncontrolled children, a false seed,
- Darby Translation (DBY)
- Against whom do ye sport yourselves? Against whom do ye make a wide mouth, [and] draw out the tongue? Are ye not children of transgression, a seed of falsehood,
- Webster's Bible (WBS)
- Against whom do ye sport yourselves? against whom make ye a wide mouth, [and] thrust out the tongue? [are] ye not children of transgression, a seed of falsehood,
- Young's Literal Translation (YLT)
- Against whom do ye sport yourselves? Against whom enlarge ye the mouth? Prolong ye the tongue? Are not ye children of transgression? a false seed?
Read in context
- 2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- 3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.
- 4ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
- 5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
- 6ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
Cross references
- 2 Peter 2:13 2 ಪೇತ್ರನು 2:13ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
- Isaiah 1:4 ಯೆಶಾಯ 1:4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
- Exodus 9:17 ವಿಮೋಚನಕಾಂಡ 9:17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
- Psalm 35:21 ಕೀರ್ತನೆಗಳು 35:21ಹೌದು, ನನಗೆ ವಿರೋಧವಾಗಿ ತಮ್ಮ ಬಾಯನ್ನು ಅಗಲ ಮಾಡಿ--ಆಹಾ, ಆಹಾ ನಮ್ಮ ಕಣ್ಣು ಅದನ್ನು ನೋಡಿತು ಅನ್ನುತ್ತಾರೆ.
- Isaiah 30:1 ಯೆಶಾಯ 30:1ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Exodus 16:7–8 ವಿಮೋಚನಕಾಂಡ 16:7–8ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು. ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- Ephesians 2:2–3 ಎಫೆಸದವರಿಗೆ 2:2–3ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Matthew 13:38 ಮತ್ತಾಯನು 13:38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- Numbers 16:11 ಅರಣ್ಯಕಾಂಡ 16:11ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
- Judges 16:25–27 ನ್ಯಾಯಸ್ಥಾಪಕರು 16:25–27ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು. ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು. ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.
- Ezekiel 2:4 ಯೆಹೆಜ್ಕೇಲನು 2:4ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.