Isaiah · chapter 57 · verse 9
Isaiah 57:9 in Kannada
ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
Bahu sugandha dravyagalannu koodisi, tailadondige raajana balige hogiddee, doorakke ninna sevakarannu kaluhisiddee, paataala dashtu neechasthitige ilididdee.
Isaiah 57:9 in English
- King James Version (KJV)
- And thou wentest to the king with ointment, and didst increase thy perfumes, and didst send thy messengers far off, and didst debase [thyself even] unto hell.
- World English Bible (WEB)
- You went to the king with oil, increased your perfumes, sent your ambassadors far off, and degraded yourself even to Sheol.
- American Standard Version (ASV)
- And thou wentest to the king with oil, and didst increase thy perfumes, and didst send thine ambassadors far off, and didst debase thyself even unto Sheol.
- Bible in Basic English (BBE)
- And you went to Melech with oil and much perfume, and you sent your representatives far off, and went as low as the underworld.
- Darby Translation (DBY)
- And thou wentest to the king with ointment, and didst multiply thy perfumes, and didst send thy messengers afar off, and didst debase thyself unto Sheol.
- Webster's Bible (WBS)
- And thou wentest to the king with ointment, and didst increase thy perfumes, and didst send thy messengers far off, and didst debase [thyself even] to hell.
- Young's Literal Translation (YLT)
- And goest joyfully to the king in ointment, And dost multiply thy perfumes, And sendest thine ambassadors afar off, And humblest thyself unto Sheol.
Read in context
- 7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
- 8ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
- 9ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
- 10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
- 11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
Cross references
- Ezekiel 23:16 ಯೆಹೆಜ್ಕೇಲನು 23:16ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು.
- Colossians 2:18 ಕೊಲೊಸ್ಸೆಯವರಿಗೆ 2:18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Isaiah 30:1–6 ಯೆಶಾಯ 30:1–6ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- Ezekiel 23:40 ಯೆಹೆಜ್ಕೇಲನು 23:40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
- Hosea 7:11 ಹೋಶೇಯ 7:11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
- Isaiah 2:9 ಯೆಶಾಯ 2:9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- Proverbs 7:17 ಜ್ಞಾನೋಕ್ತಿಗಳು 7:17ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
- Ezekiel 16:33 ಯೆಹೆಜ್ಕೇಲನು 16:33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
- 2 Kings 16:7–11 2 ಅರಸುಗಳು 16:7–11ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು. ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು. ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು. ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.