Isaiah · chapter 58 · verse 10
Isaiah 58:10 in Kannada
ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
Hasidavana kadege ninna manassu hoguvante maadi, kundi hodavana praanavannu truptipadisidare aaga ninna belaku kattaleyalli udayisuvadu. Ninna andha kaaravu madhyaahnada haage iruvadu.
Isaiah 58:10 in English
- King James Version (KJV)
- And [if] thou draw out thy soul to the hungry, and satisfy the afflicted soul; then shall thy light rise in obscurity, and thy darkness [be] as the noonday:
- World English Bible (WEB)
- and if you pour out your soul to the hungry, and satisfy the afflicted soul, then your light will rise in darkness, and your obscurity will be as the noonday;
- American Standard Version (ASV)
- and if thou draw out thy soul to the hungry, and satisfy the afflicted soul: then shall thy light rise in darkness, and thine obscurity be as the noonday;
- Bible in Basic English (BBE)
- And if you give your bread to those in need of it, so that the troubled one may have his desire; then you will have light in the dark, and your night will be as the full light of the sun:
- Darby Translation (DBY)
- and thou proffer thy soul to the hungry, and satisfy the afflicted soul: then shall thy light rise in the darkness, and thine obscurity be as midday;
- Webster's Bible (WBS)
- And [if] thou shalt draw out thy soul to the hungry, and satisfy the afflicted soul; then shall thy light rise in obscurity, and thy darkness [be] as the noon day:
- Young's Literal Translation (YLT)
- And dost bring out to the hungry thy soul, And the afflicted soul dost satisfy, Then risen in the darkness hath thy light, And thy thick darkness [is] as noon.
Read in context
- 8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- 9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- 10ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- 11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- 12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
Cross references
- Proverbs 11:24–25 ಜ್ಞಾನೋಕ್ತಿಗಳು 11:24–25ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ. ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Psalm 37:6 ಕೀರ್ತನೆಗಳು 37:6ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- Isaiah 58:7–8 ಯೆಶಾಯ 58:7–8ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Job 11:17 ಯೋಬನು 11:17ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
- Deuteronomy 15:7–10 ಧರ್ಮೋಪದೇಶಕಾಂಡ 15:7–10ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ. ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು. ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ. ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
- Luke 18:22 ಲೂಕನು 18:22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Psalm 112:5–9 ಕೀರ್ತನೆಗಳು 112:5–9ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು. ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು. ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ. ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು. ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- Proverbs 28:27 ಜ್ಞಾನೋಕ್ತಿಗಳು 28:27ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.