Isaiah · chapter 58 · verse 3
Isaiah 58:3 in Kannada
ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
Naavu upavaasa maadiddeve, neenu yaake noduvadilla? Namma praanavannu kundisalu neenu gamanisadiruvadeke endu avaru andu kolluttaare; igo, nimma upavaasada dinadalli nimma ishtavannu teerisutteeri mattu nimma ellaa duditavannu nirbandhisutteeri.
Isaiah 58:3 in English
- King James Version (KJV)
- Wherefore have we fasted, [say they], and thou seest not? [wherefore] have we afflicted our soul, and thou takest no knowledge? Behold, in the day of your fast ye find pleasure, and exact all your labours.
- World English Bible (WEB)
- ‘Why have we fasted,’ they say, ‘and you don’t see? Why have we afflicted our soul, and you don’t notice?’ “Behold, in the day of your fast you find pleasure, and oppress all your laborers.
- American Standard Version (ASV)
- Wherefore have we fasted, [say they], and thou seest not? [wherefore] have we afflicted our soul, and thou takest no knowledge? Behold, in the day of your fast ye find [your own] pleasure, and exact all your labors.
- Bible in Basic English (BBE)
- They say, Why have we kept ourselves from food, and you do not see it? why have we kept ourselves from pleasure, and you take no note of it? If, in the days when you keep from food, you take the chance to do your business, and get in your debts;
- Darby Translation (DBY)
- — Wherefore have we fasted, and thou seest not; have afflicted our soul, and thou takest no knowledge? Behold, in the day of your fast ye find what pleaseth [you], and exact all your labours.
- Webster's Bible (WBS)
- Why have we fasted, [say they] , and thou seest not? [why] have we afflicted our soul, and thou takest no knowledge? Behold, in the day of your fast ye find pleasure, and exact all your labors.
- Young's Literal Translation (YLT)
- 'Why have we fasted, and Thou hast not seen? We have afflicted our soul, and Thou knowest not.' Lo, in the day of your fast ye find pleasure, And all your labours ye exact.
Read in context
- 1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- 2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- 3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- 4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
- 5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
Cross references
- Luke 18:9–12 ಲೂಕನು 18:9–12ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು. ಇಬ್ಬರು ಪ್ರಾರ್ಥನೆ ಮಾಡುವದಕ್ಕೆ ದೇವಾಲಯದೊಳಗೆ ಹೋದರು; ಒಬ್ಬನು ಫರಿಸಾಯನು, ಮತ್ತೊಬ್ಬನು ಸುಂಕದವನು. ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Matthew 20:11–12 ಮತ್ತಾಯನು 20:11–12ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ-- ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
- Leviticus 16:29 ಯಾಜಕಕಾಂಡ 16:29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
- Jonah 3:6–8 ಯೋನ 3:6–8ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
- Nehemiah 5:7 ನೆಹೆಮೀಯ 5:7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Daniel 10:2–3 ದಾನಿಯೇಲನು 10:2–3ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು. ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
- Luke 15:29 ಲೂಕನು 15:29ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
- Isaiah 22:13 ಯೆಶಾಯ 22:13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Micah 3:9–11 ಮೀಕ 3:9–11ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.