Isaiah · chapter 58 · verse 4
Isaiah 58:4 in Kannada
ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
Igo, vyaajya kkoo horaatakkoo dushtatvada mushtiyinda hodeyuvadakkoo neevu upavaasamaadutteeri. Nimma svaravu melakke kelisuvante ee divasa upavaasa maadida haage neevu maadabediri.
Isaiah 58:4 in English
- King James Version (KJV)
- Behold, ye fast for strife and debate, and to smite with the fist of wickedness: ye shall not fast as [ye do this] day, to make your voice to be heard on high.
- World English Bible (WEB)
- Behold, you fast for strife and contention, and to strike with the fist of wickedness. You don’t fast today so as to make your voice to be heard on high.
- American Standard Version (ASV)
- Behold, ye fast for strife and contention, and to smite with the fist of wickedness: ye fast not this day so as to make your voice to be heard on high.
- Bible in Basic English (BBE)
- If keeping from food makes you quickly angry, ready for fighting and giving blows with evil hands; your holy days are not such as to make your voice come to my ears on high.
- Darby Translation (DBY)
- Behold, ye have fasted for strife and debate, and to smite with the fist of wickedness; ye do not at present fast, to cause your voice to be heard on high.
- Webster's Bible (WBS)
- Behold, ye fast for strife and debate, and to smite with the fist of wickedness: ye shall not fast as [ye do this] day, to make your voice to be heard on high.
- Young's Literal Translation (YLT)
- Lo, for strife and debate ye fast, And to smite with the fist of wickedness, Ye fast not as [to] -day, To sound in the high place your voice.
Read in context
- 2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- 3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- 4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
- 5ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
- 6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
Cross references
- 1 Kings 21:9–13 1 ಅರಸುಗಳು 21:9–13ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು. ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು. ಅವರು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ನಿಲ್ಲಿಸಿ ದರು. ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Matthew 6:16–18 ಮತ್ತಾಯನು 6:16–18ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ. ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Isaiah 59:2 ಯೆಶಾಯ 59:2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Acts 23:1–2 ಅಪೊಸ್ತಲರ ಕೃತ್ಯಗಳು 23:1–2ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು. ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- Joel 2:13–14 ಯೋವೇಲ 2:13–14ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- Philippians 1:14–15 ಫಿಲಿಪ್ಪಿಯವರಿಗೆ 1:14–15ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ. ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
- Jonah 3:7 ಯೋನ 3:7ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ;
- Luke 20:47 ಲೂಕನು 20:47ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
- Isaiah 59:6 ಯೆಶಾಯ 59:6ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.