Isaiah · chapter 6 · verse 8
Isaiah 6:8 in Kannada
ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
Aaga naanu -- yaarannu kaluhisali; yaavanu nama goskara hoguvanu emba kartana nudiyannu saha keli -- naanu iddene; nannannu kaluhisu andenu.
Isaiah 6:8 in English
- King James Version (KJV)
- Also I heard the voice of the Lord, saying, Whom shall I send, and who will go for us? Then said I, Here [am] I; send me.
- World English Bible (WEB)
- I heard the Lord’s voice, saying, “Whom shall I send, and who will go for us?” Then I said, “Here I am. Send me!”
- American Standard Version (ASV)
- And I heard the voice of the Lord, saying, Whom shall I send, and who will go for us? Then I said, Here am I; send me.
- Bible in Basic English (BBE)
- And the voice of the Lord came to my ears, saying, Whom am I to send, and who will go for us? Then I said, Here am I, send me.
- Darby Translation (DBY)
- And I heard the voice of the Lord saying, Whom shall I send, and who will go for us? And I said, Here am I; send me.
- Webster's Bible (WBS)
- Also I heard the voice of the LORD, saying, Whom shall I send, and who will go for us? Then said I, Here [am] I; send me.
- Young's Literal Translation (YLT)
- And I hear the voice of the Lord, saying: 'Whom do I send? and who doth go for Us?' And I say, 'Here [am] I, send me.'
Read in context
- 6ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು
- 7ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
- 8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- 9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
- 10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
Cross references
- Exodus 4:10–13 ವಿಮೋಚನಕಾಂಡ 4:10–13ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು. ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ? ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು. ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
- Acts 26:16–17 ಅಪೊಸ್ತಲರ ಕೃತ್ಯಗಳು 26:16–17ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Acts 22:21 ಅಪೊಸ್ತಲರ ಕೃತ್ಯಗಳು 22:21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- Matthew 4:20–22 ಮತ್ತಾಯನು 4:20–22ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Deuteronomy 4:33–36 ಧರ್ಮೋಪದೇಶಕಾಂಡ 4:33–36ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ? ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ? ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ. ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
- Acts 28:25–28 ಅಪೊಸ್ತಲರ ಕೃತ್ಯಗಳು 28:25–28ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
- Genesis 3:8–10 ಆದಿಕಾಂಡ 3:8–10ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು. ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು. ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
- Genesis 1:26 ಆದಿಕಾಂಡ 1:26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- Genesis 11:7 ಆದಿಕಾಂಡ 11:7ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.