Isaiah · chapter 60 · verse 10
Isaiah 60:10 in Kannada
ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
Idallade anyara makkalu ninna godegalannu kattuvaru; avara arasaru saha ninage seve maaduvaru; nanna raudradalli ninnannu hodedenu; aadare nanna kataakshadalli ninnannu karunisuvenu.
Isaiah 60:10 in English
- King James Version (KJV)
- And the sons of strangers shall build up thy walls, and their kings shall minister unto thee: for in my wrath I smote thee, but in my favour have I had mercy on thee.
- World English Bible (WEB)
- “Foreigners will build up your walls, and their kings will serve you; for in my wrath I struck you, but in my favor I have had mercy on you.
- American Standard Version (ASV)
- And foreigners shall build up thy walls, and their kings shall minister unto thee: for in my wrath I smote thee, but in my favor have I had mercy on thee.
- Bible in Basic English (BBE)
- And men from strange countries will be building up your walls, and their kings will be your servants: for in my wrath I sent punishment on you, but in my grace I have had mercy on you.
- Darby Translation (DBY)
- And the sons of the alien shall build up thy walls, and their kings shall minister unto thee. For in my wrath I smote thee, but in my favour have I had mercy on thee.
- Webster's Bible (WBS)
- And the sons of strangers shall build up thy walls, and their kings shall minister to thee: for in my wrath I smote thee, but in my favor have I had mercy on thee.
- Young's Literal Translation (YLT)
- And sons of a stranger have built thy walls, And their kings do serve thee, For in My wrath I have smitten thee, And in My good pleasure I have pitied thee.
Read in context
- 8ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
- 9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- 10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- 11ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
- 12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
Cross references
- Isaiah 61:5 ಯೆಶಾಯ 61:5ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Revelation 21:26 ಪ್ರಕಟನೆ 21:26ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Isaiah 60:3 ಯೆಶಾಯ 60:3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Zechariah 6:15 ಜೆಕರ್ಯ 6:15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Isaiah 14:1–2 ಯೆಶಾಯ 14:1–2ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು. ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- Isaiah 54:7–8 ಯೆಶಾಯ 54:7–8ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Isaiah 57:17–18 ಯೆಶಾಯ 57:17–18ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Isaiah 12:1 ಯೆಶಾಯ 12:1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- Ezra 7:12–28 ಎಜ್ರನು 7:12–28ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ. ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ. ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ. ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ. ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು. ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು. ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು? ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ. ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು. ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು. ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.