Isaiah · chapter 60 · verse 15
Isaiah 60:15 in Kannada
ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
Haaduhoguvavarillade neenu bidalpattavaloo hage maadalpattavaloo aagi ddakke badalaagi ninnannu nityavaada ghanateyoo aneka santatigalalli ullaasavaagiyoo maadu ttene.
Isaiah 60:15 in English
- King James Version (KJV)
- Whereas thou hast been forsaken and hated, so that no man went through [thee], I will make thee an eternal excellency, a joy of many generations.
- World English Bible (WEB)
- “Whereas you have been forsaken and hated, so that no one passed through you, I will make you an eternal excellency, a joy of many generations.
- American Standard Version (ASV)
- Whereas thou hast been forsaken and hated, so that no man passed through thee, I will make thee an eternal excellency, a joy of many generations.
- Bible in Basic English (BBE)
- And though you were turned away from, and hated, and had no helper, I will make you a pride for ever, a joy from generation to generation.
- Darby Translation (DBY)
- Instead of thy being forsaken and hated, so that no one went through [thee], I will make thee an eternal excellency, a joy from generation to generation.
- Webster's Bible (WBS)
- Whereas thou hast been forsaken and hated, so that no man went through [thee] , I will make thee an eternal excellence, a joy of many generations.
- Young's Literal Translation (YLT)
- Instead of thy being forsaken and hated, And none passing through, I have made thee for an excellency age-during, A joy of generation and generation.
Read in context
- 13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
- 14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- 15ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
- 16ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
- 17ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
Cross references
- Isaiah 61:7 ಯೆಶಾಯ 61:7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- Jeremiah 30:17 ಯೆರೆಮೀಯ 30:17ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ.
- Isaiah 49:14–23 ಯೆಶಾಯ 49:14–23ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು. ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ. ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ. ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು. ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ. ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು. ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Revelation 11:15–17 ಪ್ರಕಟನೆ 11:15–17ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Isaiah 4:2 ಯೆಶಾಯ 4:2ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
- Isaiah 6:12 ಯೆಶಾಯ 6:12ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Isaiah 54:6–14 ಯೆಶಾಯ 54:6–14ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ. ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು. ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು. ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Isaiah 65:18 ಯೆಶಾಯ 65:18ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
- Lamentations 1:1–2 ಪ್ರಲಾಪಗಳು 1:1–2ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು! ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.