Isaiah · chapter 60 · verse 2
Isaiah 60:2 in Kannada
ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
Igo, kattale bhoomiyannoo gaadhaandhakaaravu janagalannoo muchchuvadu; aadare ninna mele kartanu udayi suvanu; aatana mahimeyu ninna mele kaana baruvadu.
Isaiah 60:2 in English
- King James Version (KJV)
- For, behold, the darkness shall cover the earth, and gross darkness the people: but the LORD shall arise upon thee, and his glory shall be seen upon thee.
- World English Bible (WEB)
- For behold, darkness will cover the earth, and thick darkness the peoples; but the LORD will arise on you, and his glory shall be seen on you.
- American Standard Version (ASV)
- For, behold, darkness shall cover the earth, and gross darkness the peoples; but Jehovah will arise upon thee, and his glory shall be seen upon thee.
- Bible in Basic English (BBE)
- For truly, the earth will be dark, and the peoples veiled in blackest night; but the Lord will be shining on you, and his glory will be seen among you.
- Darby Translation (DBY)
- For behold, darkness shall cover the earth, and gross darkness the peoples; but Jehovah will arise upon thee, and his glory shall be seen on thee.
- Webster's Bible (WBS)
- For behold, the darkness shall cover the earth, and gross darkness the people: but the LORD will arise upon thee, and his glory will be seen upon thee.
- Young's Literal Translation (YLT)
- For, lo, the darkness doth cover the earth, And thick darkness the peoples, And on thee rise doth Jehovah, And His honour on thee is seen.
Read in context
- 1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- 2ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- 3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- 4ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
Cross references
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Acts 17:30–31 ಅಪೊಸ್ತಲರ ಕೃತ್ಯಗಳು 17:30–31ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- 2 Corinthians 4:4–6 2 ಕೊರಿಂಥದವರಿಗೆ 4:4–6ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Haggai 2:7–9 ಹಗ್ಗಾಯ 2:7–9ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ephesians 4:17–20 ಎಫೆಸದವರಿಗೆ 4:17–20ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ. ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ. ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Romans 1:21–32 ರೋಮಾಪುರದವರಿಗೆ 1:21–32ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು. ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು. ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ. ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Acts 17:23 ಅಪೊಸ್ತಲರ ಕೃತ್ಯಗಳು 17:23ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.
- Numbers 16:19 ಅರಣ್ಯಕಾಂಡ 16:19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.