Isaiah · chapter 60 · verse 3
Isaiah 60:3 in Kannada
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
Anyajanaangagalu ninna prakaashakkoo arasaru ninna udayada kaantigoo baruvaru.
Isaiah 60:3 in English
- King James Version (KJV)
- And the Gentiles shall come to thy light, and kings to the brightness of thy rising.
- World English Bible (WEB)
- Nations will come to your light, and kings to the brightness of your rising.
- American Standard Version (ASV)
- And nations shall come to thy light, and kings to the brightness of thy rising.
- Bible in Basic English (BBE)
- And nations will come to your light, and kings to your bright dawn.
- Darby Translation (DBY)
- And the nations shall walk by thy light, and kings by the brightness of thy rising.
- Webster's Bible (WBS)
- And the Gentiles shall come to thy light, and kings to the brightness of thy rising.
- Young's Literal Translation (YLT)
- And come have nations to thy light, And kings to the brightness of thy rising.
Read in context
- 1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- 2ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- 3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- 4ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
- 5ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
Cross references
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Acts 13:47 ಅಪೊಸ್ತಲರ ಕೃತ್ಯಗಳು 13:47ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
- Revelation 21:24 ಪ್ರಕಟನೆ 21:24ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
- Isaiah 2:2–5 ಯೆಶಾಯ 2:2–5ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ. ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Micah 4:1–2 ಮೀಕ 4:1–2ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Psalm 68:29 ಕೀರ್ತನೆಗಳು 68:29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
- Psalm 138:4 ಕೀರ್ತನೆಗಳು 138:4ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
- John 12:32 ಯೋಹಾನನು 12:32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
- Psalm 72:17–19 ಕೀರ್ತನೆಗಳು 72:17–19ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.