Isaiah · chapter 60 · verse 4
Isaiah 60:4 in Kannada
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
Suttaloo ninna kannugalannetti nodu, avarellaroo koodikondu ninna balige baruttaare; ninna kumaa raru dooradinda baruvaru ninna kumaarteyaru ninna pakkeyalli poshane honduvaru.
Isaiah 60:4 in English
- King James Version (KJV)
- Lift up thine eyes round about, and see: all they gather themselves together, they come to thee: thy sons shall come from far, and thy daughters shall be nursed at [thy] side.
- World English Bible (WEB)
- “Lift up your eyes all around, and see: they all gather themselves together. They come to you. Your sons will come from far away, and your daughters will be carried in arms.
- American Standard Version (ASV)
- Lift up thine eyes round about, and see: they all gather themselves together, they come to thee; thy sons shall come from far, and thy daughters shall be carried in the arms.
- Bible in Basic English (BBE)
- Let your eyes be lifted up, and see: they are all coming together to you: your sons will come from far, and your daughters taken with loving care.
- Darby Translation (DBY)
- Lift up thine eyes round about, and see: all they gather themselves together, they come to thee: thy sons come from afar, and thy daughters are carried upon the side.
- Webster's Bible (WBS)
- Lift up thy eyes around, and see: all they assemble themselves, they come to thee: thy sons shall come from far, and thy daughters shall be nursed at [thy] side.
- Young's Literal Translation (YLT)
- Lift up round about thine eyes and see, All of them have been gathered, they have come to thee, Thy sons from afar do come, And thy daughters on the side are supported.
Read in context
- 2ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- 3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- 4ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
- 5ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
- 6ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
Cross references
- Isaiah 42:6 ಯೆಶಾಯ 42:6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- Isaiah 49:18 ಯೆಶಾಯ 49:18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
- Isaiah 49:20–22 ಯೆಶಾಯ 49:20–22ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- Galatians 3:28–29 ಗಲಾತ್ಯದವರಿಗೆ 3:28–29ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Isaiah 43:6 ಯೆಶಾಯ 43:6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Acts 13:44 ಅಪೊಸ್ತಲರ ಕೃತ್ಯಗಳು 13:44ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
- Matthew 8:11 ಮತ್ತಾಯನು 8:11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
- Isaiah 66:11–12 ಯೆಶಾಯ 66:11–12ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
- John 4:35 ಯೋಹಾನನು 4:35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
- Isaiah 11:12 ಯೆಶಾಯ 11:12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.