Isaiah · chapter 61 · verse 2
Isaiah 61:2 in Kannada
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
Kartana angeekaarada varushavannu saari heluvadakkoo namma devaru muyyige muyyi koduva divasavannu prasiddhi maaduvadakkoo duhkhavullavarellarannu aadarisuvadakkoo
Isaiah 61:2 in English
- King James Version (KJV)
- To proclaim the acceptable year of the LORD, and the day of vengeance of our God; to comfort all that mourn;
- World English Bible (WEB)
- to proclaim the year of the LORD’s favor and the day of vengeance of our God, to comfort all who mourn,
- American Standard Version (ASV)
- to proclaim the year of Jehovah’s favor, and the day of vengeance of our God; to comfort all that mourn;
- Bible in Basic English (BBE)
- To give knowledge that the year of the Lord's good pleasure has come, and the day of punishment from our God; to give comfort to all who are sad;
- Darby Translation (DBY)
- to proclaim the acceptable year of Jehovah, and the day of vengeance of our God; to comfort all that mourn;
- Webster's Bible (WBS)
- To proclaim the acceptable year of the LORD, and the day of vengeance of our God; to comfort all that mourn;
- Young's Literal Translation (YLT)
- To proclaim the year of the good pleasure of Jehovah, And the day of vengeance of our God, To comfort all mourners.
Read in context
- 1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- 2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- 3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- 4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
Cross references
- Matthew 5:4 ಮತ್ತಾಯನು 5:4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- Isaiah 34:8 ಯೆಶಾಯ 34:8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Luke 4:19 ಲೂಕನು 4:19ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
- Isaiah 57:18 ಯೆಶಾಯ 57:18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- 2 Thessalonians 2:16–17 2 ಥೆಸಲೊನೀಕದವರಿಗೆ 2:16–17ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ. ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Isaiah 49:8 ಯೆಶಾಯ 49:8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- Jeremiah 31:13 ಯೆರೆಮೀಯ 31:13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- Luke 21:22–24 ಲೂಕನು 21:22–24ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.