Isaiah · chapter 62 · verse 6
Isaiah 62:6 in Kannada
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
O yeroosaleme, ninna godegala mele kaavalugaararannu nemisiddene; avaru hagali nalloo raatriyalloo maunavaagiruvade illa. Kartanannu jnyaapakapadisuvavare, summanirabediri.
Isaiah 62:6 in English
- King James Version (KJV)
- I have set watchmen upon thy walls, O Jerusalem, [which] shall never hold their peace day nor night: ye that make mention of the LORD, keep not silence,
- World English Bible (WEB)
- I have set watchmen on your walls, Jerusalem. They will never be silent day nor night. You who call on the LORD, take no rest,
- American Standard Version (ASV)
- I have set watchmen upon thy walls, O Jerusalem; they shall never hold their peace day nor night: ye that are Jehovah’s remembrancers, take ye no rest,
- Bible in Basic English (BBE)
- I have put watchmen on your walls, O Jerusalem; they will not keep quiet day or night: you who are the Lord's recorders, take no rest,
- Darby Translation (DBY)
- I have set watchmen upon thy walls, Jerusalem; all the day and all the night they shall never hold their peace: ye that put Jehovah in remembrance, keep not silence,
- Webster's Bible (WBS)
- I have set watchmen upon thy walls, O Jerusalem, [which] shall never hold their peace day nor night: ye that make mention of the LORD, keep not silence,
- Young's Literal Translation (YLT)
- 'On thy walls, O Jerusalem, I have appointed watchmen, All the day, and all the night, Continually, they are not silent.' O ye remembrancers of Jehovah, Keep not silence for yourselves,
Read in context
- 4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- 5ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- 6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- 8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
Cross references
- Isaiah 52:8 ಯೆಶಾಯ 52:8ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
- Ezekiel 3:17–21 ಯೆಹೆಜ್ಕೇಲನು 3:17–21ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು; ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
- Psalm 134:1–2 ಕೀರ್ತನೆಗಳು 134:1–2ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- 1 Thessalonians 5:17 1 ಥೆಸಲೊನೀಕದವರಿಗೆ 5:17ಎಡೆಬಿಡದೆ ಪ್ರಾರ್ಥನೆ ಮಾಡಿರಿ.
- Jeremiah 6:17 ಯೆರೆಮೀಯ 6:17ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Luke 11:5–13 ಲೂಕನು 11:5–13ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು; ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು. ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು. ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ? ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ? ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- Ezekiel 33:2–9 ಯೆಹೆಜ್ಕೇಲನು 33:2–9ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ, ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ, ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು. ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು. ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು. ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- Genesis 32:26 ಆದಿಕಾಂಡ 32:26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
- Psalm 74:2 ಕೀರ್ತನೆಗಳು 74:2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- Luke 18:39 ಲೂಕನು 18:39ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.