Isaiah · chapter 63 · verse 12
Isaiah 63:12 in Kannada
ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
Mosheya balagaiya mukhaam tara, tanna mahimeyulla tolininda avarannu nadisidavanoo tanage nityavaada hesarannuntu maaduva haage avara munde neerugalannu bhedisidavanu elli?
Isaiah 63:12 in English
- King James Version (KJV)
- That led [them] by the right hand of Moses with his glorious arm, dividing the water before them, to make himself an everlasting name?
- World English Bible (WEB)
- Who caused his glorious arm to be at Moses’ right hand? Who divided the waters before them, to make himself an everlasting name?
- American Standard Version (ASV)
- that caused his glorious arm to go at the right hand of Moses? that divided the waters before them, to make himself an everlasting name?
- Bible in Basic English (BBE)
- He who made the arm of his glory go at the right hand of Moses, by whom the waters were parted before them, to make himself an eternal name;
- Darby Translation (DBY)
- his glorious arm leading them by the right hand of Moses, dividing the waters before them, to make himself an everlasting name,
- Webster's Bible (WBS)
- That led [them] by the right hand of Moses with his glorious arm, dividing the water before them, to make himself an everlasting name?
- Young's Literal Translation (YLT)
- Leading by the right hand of Moses, the arm of His glory, Cleaving waters from before them, To make to Himself a name age-during.
Read in context
- 10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- 11ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
- 12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
- 13ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- 14ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
Cross references
- Exodus 15:16 ವಿಮೋಚನಕಾಂಡ 15:16ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
- Psalm 78:13 ಕೀರ್ತನೆಗಳು 78:13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Exodus 14:16–17 ವಿಮೋಚನಕಾಂಡ 14:16–17ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು. ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
- Exodus 14:21–22 ವಿಮೋಚನಕಾಂಡ 14:21–22ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Psalm 114:5–7 ಕೀರ್ತನೆಗಳು 114:5–7ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Isaiah 55:13 ಯೆಶಾಯ 55:13ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Nehemiah 9:11 ನೆಹೆಮೀಯ 9:11ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
- Isaiah 11:15 ಯೆಶಾಯ 11:15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Psalm 136:13–16 ಕೀರ್ತನೆಗಳು 136:13–16ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.