Isaiah · chapter 64 · verse 1
Isaiah 64:1 in Kannada
ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
Aahaa, neenu aakaashagalannu haridu bittu, ilidu bandiddare eshto chennaa gittu! Baa! Bettagalu ninna sammukhadalli karagali! Janaangagalu ninna sammukhadalli naduguva haage,
Isaiah 64:1 in English
- King James Version (KJV)
- Oh that thou wouldest rend the heavens, that thou wouldest come down, that the mountains might flow down at thy presence,
- World English Bible (WEB)
- Oh that you would tear the heavens, that you would come down, that the mountains might quake at your presence—
- American Standard Version (ASV)
- Oh that thou wouldest rend the heavens, that thou wouldest come down, that the mountains might quake at thy presence,
- Bible in Basic English (BBE)
- O let the heavens be broken open and come down, so that the mountains may be shaking before you,
- Darby Translation (DBY)
- Oh, that thou wouldest rend the heavens, that thou wouldest come down, — that the mountains might flow down at thy presence,
- Webster's Bible (WBS)
- Oh that thou wouldst rend the heavens, that thou wouldst come down, that the mountains might flow down at thy presence,
- Young's Literal Translation (YLT)
- Didst Thou not rend the heavens? Thou didst come down, From thy presence did mountains flow,
Read in context
- 1ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
- 2ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- 3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
Cross references
- Micah 1:3–4 ಮೀಕ 1:3–4ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು. ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ಸುರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವವು; ತಗ್ಗುಗಳು ಸೀಳುವವು.
- Nahum 1:5–6 ನಹೂಮ 1:5–6ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು. ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Mark 1:10 ಮಾರ್ಕನು 1:10ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
- Exodus 19:18–19 ವಿಮೋಚನಕಾಂಡ 19:18–19ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು. ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Psalm 144:5–6 ಕೀರ್ತನೆಗಳು 144:5–6ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- Psalm 68:8 ಕೀರ್ತನೆಗಳು 68:8ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
- Habakkuk 3:1–13 ಹಬಕ್ಕೂಕ 3:1–13ಶಿಗ್ಯೋನೋತನ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ. ಕರ್ತನೇ, ನಿನ್ನ ಮಾತನ್ನು ಕೇಳಿ ಭಯಪಟ್ಟಿದ್ದೇನೆ. ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು; ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ. ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು. ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ. ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- Isaiah 63:15 ಯೆಶಾಯ 63:15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Amos 9:13 ಆಮೋಸ 9:13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Psalm 114:4–7 ಕೀರ್ತನೆಗಳು 114:4–7ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.