Isaiah · chapter 64 · verse 10
Isaiah 64:10 in Kannada
ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
Ninna parishuddha pattanagalu adavi yaadavu; cheeyonu adaviyaayitu; yeroo salemu haalaayitu.
Isaiah 64:10 in English
- King James Version (KJV)
- Thy holy cities are a wilderness, Zion is a wilderness, Jerusalem a desolation.
- World English Bible (WEB)
- Your holy cities have become a wilderness. Zion has become a wilderness, Jerusalem a desolation.
- American Standard Version (ASV)
- Thy holy cities are become a wilderness, Zion is become a wilderness, Jerusalem a desolation.
- Bible in Basic English (BBE)
- Your holy towns have become a waste, Zion has become a waste, Jerusalem is a mass of broken walls.
- Darby Translation (DBY)
- Thy holy cities are become a wilderness, Zion is a wilderness, Jerusalem a desolation.
- Webster's Bible (WBS)
- Thy holy cities are a wilderness, Zion is a wilderness, Jerusalem a desolation.
- Young's Literal Translation (YLT)
- Thy holy cities have been a wilderness, Zion a wilderness hath been, Jerusalem a desolation.
Read in context
- 8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- 9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
- 10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
- 11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- 12ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Cross references
- Isaiah 1:7 ಯೆಶಾಯ 1:7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- 2 Chronicles 36:19–21 2 ಪೂರ್ವಕಾಲವೃತ್ತಾಂತ 36:19–21ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
- Lamentations 2:4–8 ಪ್ರಲಾಪಗಳು 2:4–8ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಮಗಳ ಗುಡಾರದಲ್ಲಿ ಸುರಿದಿದ್ದಾನೆ. ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ. ಆತನು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾನೆ. ಆತನು ತನ್ನ ಸಭಾಸ್ಥಾನಗಳನ್ನು ನಾಶಮಾಡಿದ್ದಾನೆ; ಕರ್ತನು ಚೀಯೋನಿನಲ್ಲಿ ಪವಿತ್ರ ಹಬ್ಬಗಳನ್ನೂ ಸಬ್ಬತ್ತನ್ನೂ ಮರೆತುಬಿಡುವಂತೆ ಮಾಡಿದ್ದಾನೆ, ತನ್ನ ಕೋಪದ ಉರಿಯಲ್ಲಿ ಅರಸನನ್ನೂ ಯಾಜಕನನ್ನೂ ತುಚ್ಛೀಕರಿ ಸಿದ್ದಾನೆ. ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ. ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
- Daniel 12:7 ದಾನಿಯೇಲನು 12:7ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು.
- Lamentations 1:1–4 ಪ್ರಲಾಪಗಳು 1:1–4ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು! ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು. ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ. ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- 2 Kings 25:9 2 ಅರಸುಗಳು 25:9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Psalm 79:1–7 ಕೀರ್ತನೆಗಳು 79:1–7ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ. ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ. ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ. ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ. ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ? ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು. ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
- Revelation 11:1–2 ಪ್ರಕಟನೆ 11:1–2ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು. ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Daniel 9:26–27 ದಾನಿಯೇಲನು 9:26–27ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು. ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Lamentations 5:18 ಪ್ರಲಾಪಗಳು 5:18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.