Isaiah · chapter 64 · verse 5
Isaiah 64:5 in Kannada
ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
Santoshapattu neetiyannu kaikolluvavanannoo ninna maargagalalli ninnannu jnyaapakamaaduvava nannoo neenu edurugolluttee; igo, neenu raudranaagiruvi, yaakandare naavu rakshisalpadada haage paapadalli munduvaridevu.
Isaiah 64:5 in English
- King James Version (KJV)
- Thou meetest him that rejoiceth and worketh righteousness, [those that] remember thee in thy ways: behold, thou art wroth; for we have sinned: in those is continuance, and we shall be saved.
- World English Bible (WEB)
- You meet him who rejoices and does righteousness, those who remember you in your ways. Behold, you were angry, and we sinned. We have been in sin for a long time. Shall we be saved?
- American Standard Version (ASV)
- Thou meetest him that rejoiceth and worketh righteousness, those that remember thee in thy ways: behold, thou wast wroth, and we sinned: in them [have we been] of long time; and shall we be saved?
- Bible in Basic English (BBE)
- Will you not have mercy on him who takes pleasure in doing righteousness, even on those who keep in mind your ways? Truly you were angry, and we went on doing evil, and sinning against you in the past.
- Darby Translation (DBY)
- Thou meetest him that rejoiceth to do righteousness, those that remember thee in thy ways: (behold, thou wast wroth, and we have sinned:) in those is perpetuity, and we shall be saved.
- Webster's Bible (WBS)
- Thou meetest him that rejoiceth, and worketh righteousness, [those that] remember thee in thy ways: behold, thou art wroth; for we have sinned: in those is continuance, and we shall be saved.
- Young's Literal Translation (YLT)
- Thou hast met with the rejoicer And the doer of righteousness, In Thy ways they remember Thee, Lo, Thou hast been wroth when we sin, By them [is] continuance, and we are saved.
Read in context
- 3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
- 4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
- 5ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
- 6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- 7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
Cross references
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Philippians 3:13–15 ಫಿಲಿಪ್ಪಿಯವರಿಗೆ 3:13–15ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- Exodus 29:42–43 ವಿಮೋಚನಕಾಂಡ 29:42–43ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು. ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
- Malachi 3:6 ಮಲಾಕಿಯ 3:6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
- Psalm 112:1 ಕೀರ್ತನೆಗಳು 112:1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Acts 10:2–4 ಅಪೊಸ್ತಲರ ಕೃತ್ಯಗಳು 10:2–4ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Exodus 30:6 ವಿಮೋಚನಕಾಂಡ 30:6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
- Isaiah 56:1–7 ಯೆಶಾಯ 56:1–7ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ. ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು. ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Psalm 90:7–9 ಕೀರ್ತನೆಗಳು 90:7–9ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ