Isaiah · chapter 64 · verse 7
Isaiah 64:7 in Kannada
ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
Ninna hesarannu kareyuvavanoo ninnannu hidu kolluvadakke tannannu prerisikolluvavanu obbanoo illa; ninna mukhavannu namage maremaadiddee; namma akramagaligaagi nammannu dahisibittiddee.
Isaiah 64:7 in English
- King James Version (KJV)
- And [there is] none that calleth upon thy name, that stirreth up himself to take hold of thee: for thou hast hid thy face from us, and hast consumed us, because of our iniquities.
- World English Bible (WEB)
- There is no one who calls on your name, who stirs himself up to take hold of you; for you have hidden your face from us, and have consumed us by means of our iniquities.
- American Standard Version (ASV)
- And there is none that calleth upon thy name, that stirreth up himself to take hold of thee; for thou hast hid thy face from us, and hast consumed us by means of our iniquities.
- Bible in Basic English (BBE)
- And there is no one who makes prayer to your name, or who is moved to keep true to you: for your face is veiled from us, and you have given us into the power of our sins.
- Darby Translation (DBY)
- and there is none that calleth upon thy name, that stirreth up himself to take hold of thee; for thou hast hidden thy face from us, and hast caused us to melt away through our iniquities.
- Webster's Bible (WBS)
- And [there is] none that calleth upon thy name, that stirreth up himself to take hold of thee: for thou hast hid thy face from us, and hast consumed us, because of our iniquities.
- Young's Literal Translation (YLT)
- And there is none calling in Thy name, Stirring up himself to lay hold on Thee, For Thou hast hid Thy face from us, And thou meltest us away by our iniquities.
Read in context
- 5ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
- 6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- 7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
- 8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- 9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
Cross references
- Ezekiel 22:30 ಯೆಹೆಜ್ಕೇಲನು 22:30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 59:16 ಯೆಶಾಯ 59:16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- Isaiah 59:2 ಯೆಶಾಯ 59:2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Hosea 7:7 ಹೋಶೇಯ 7:7ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
- Isaiah 54:8 ಯೆಶಾಯ 54:8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Isaiah 27:5 ಯೆಶಾಯ 27:5ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
- Ezekiel 22:18–22 ಯೆಹೆಜ್ಕೇಲನು 22:18–22ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Isaiah 56:4 ಯೆಶಾಯ 56:4ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Deuteronomy 31:17–18 ಧರ್ಮೋಪದೇಶಕಾಂಡ 31:17–18ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.